newscis.com
ಲಾಹೋರ್: ಪಾಕಿಸ್ತಾನದಲ್ಲಿ ಮತ್ತೆ ಭೀತಿ ಆವರಿಸಿದೆ. ಪಾಕಿಸ್ತಾನದ ಲಾಹೋರ್ನಲ್ಲಿ ಮೂರು ಸ್ಫೋಟಗಳು ಸಂಭವಿಸಿವೆ ಎಂದು ಹೇಳಲಾಗಿದೆ.
ಲಾಹೋರ್ನಾದ್ಯಂತ ಸೈರನ್ಗಳು ಮೊಳಗುತ್ತಿದ್ದು, ಸದ್ಯಕ್ಕೆ ಲಾಹೋರ್ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ. ಸ್ಫೋಟಗಳ ನಂತರ, ಲಾಹೋರ್ನಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ ಎಂಬ ಮಾಹಿತಿ ಬಂದಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತೀಯ ಸೇನೆಯು ನಡೆಸಿದ ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದಲ್ಲಿ ಭಯದ ವಾತಾವರಣ ಮನೆ ಮಾಡಿದೆ.
ಸ್ಫೋಟಗಳ ಸ್ಥಳ ಮತ್ತು ಅವುಗಳ ಕಾರಣವನ್ನು ಹುಡುಕುತ್ತಿದ್ದೇವೆ ಎಂದು ಪಾಕಿಸ್ತಾನಿ ಅಧಿಕಾರಿಗಳು ತಿಳಿಸಿದ್ದಾರೆ.