newsics.com
ವಿಜಯವಾಡ/ಮುಂಬೈ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ ಮೂಲದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಶ್ರೀ ಸತ್ಯಸಾಯಿ ಜಿಲ್ಲೆಯ ಗೋರಂಟ್ಲ ಮಂಡಲದ ಕಲ್ಲಿತಾಂಡದ ಅಗ್ನಿವೀರ್ ಜವಾನ್ ಮುರಳಿ ನಾಯಕ್ (24) ಹುತಾತ್ಮರಾದವರು.
ಮುರಳಿ ನಾಯಕ್, 2022 ಅಕ್ಟೋಬರ್‌ನಲ್ಲಿ ಅಗ್ನಿವೀರ್‌ಗೆ ಆಯ್ಕೆಯಾಗಿದ್ದರು. ಅವರನ್ನು ಮಹಾರಾಷ್ಟ್ರದ ನಾಸಿಕ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗುರುವಾರ ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಕರ್ತವ್ಯದಲ್ಲಿದ್ದಾಗ ಮುರಳಿ ನಾಯಕ್, ಗುಂಡಿನ ಚಕಮಕಿಯಲ್ಲಿ ಐವರು ನುಸುಳುಕೋರರನ್ನು ಕೊಂದು ಬಳಿಕ ಪ್ರಾಣ ತ್ಯಾಗ ಮಾಡಿದ್ದಾರೆ.
ಮುರಳಿಯ ತಂದೆ ಶ್ರೀರಾಮ್ ನಾಯಕ್, ಶುಕ್ರವಾರ ಬೆಳಗ್ಗೆ 9 ಗಂಟೆಗೆ ನಮಗೆ ಸೇನಾ ಅಧಿಕಾರಿಗಳು ಕರೆ ಮಾಡಿ ಮಗನ ಸಾವಿನ ಸುದ್ದಿ ತಿಳಿಸಿದರು. ಬೆಳಗಿನ ಜಾವ 3:30ರ ಸುಮಾರಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನನ್ನ ಮಗ ಮುರಳಿಯನ್ನು ಕಳೆದುಕೊಂಡಿದ್ದೇವೆ. ಅವನನ್ನು ಕಾಶ್ಮೀರದಲ್ಲಿ ನಿಯೋಜಿಸಲಾಗಿತ್ತು. ಅವನು ಈ ವಿಷಯವನ್ನು ನಮ್ಮಿಂದ ಮರೆಮಾಚಿದ್ದ. ಪಂಜಾಬ್‌ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಮುರಳಿ ನಮಗೆ ಹೇಳಿದ್ದ ಎಂದು ದುಃಖ ತೋಡಿಕೊಂಡರು.
https://x.com/ncbn/status/1920731797563863411
Viral Video ಮದುವೆಯಾಗಿ ಮೂರೇ ದಿನಕ್ಕೆ ಕರ್ತವ್ಯಕ್ಕೆ ಹಾಜರಾದ ಸೈನಿಕ, ಬೀಳ್ಕೊಡುವಾಗ ಪತ್ನಿ ಹೇಳಿದ್ದೇನು?