newsics.com
ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಹೆಚ್ಚಿದ ಹಿನ್ನಲೆಯಲ್ಲಿ ಬಿಸಿಸಿಐ , ಐಪಿಎಲ್ 2025 ಅನ್ನು ಒಂದು ವಾರದವರೆಗೆ ಸ್ಥಗಿತಗೊಳಿಸಿದೆ. ಹೀಗಾಗಿ ಎಲ್ಲಾ ಪಂದ್ಯಗಳನ್ನು ಮುಂದೂಡಲಾಗಿದೆ. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರೇಕ್ಷಕರ ಹಣವನ್ನು ಮರುಪಾವತಿಸುವುದಾಗಿ ಘೋಷಿಸಿದೆ.
ಆರ್ಸಿಬಿ, ಮೇ 13 ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಮತ್ತು ಮೇ 17 ರಂದು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯವನ್ನು ಆಡಬೇಕಿತ್ತು. ಆದರೆ ಈಗ ಪಂದ್ಯಾವಳಿಯನ್ನು ಸ್ಥಗಿತಗೊಳಿಸಲಾಗಿತ್ತು. ಆದ್ದರಿಂದ, ಫ್ರಾಂಚೈಸಿ ಈ ಎರಡು ಪಂದ್ಯಗಳ ಟಿಕೆಟ್‌ಗಳ ಸಂಪೂರ್ಣ ಮೊತ್ತವನ್ನು ಮರುಪಾವತಿಸುವ ನಿರ್ಧಾರಕ್ಕೆ ಬಂದಿದ್ದೆ.