newsics.com
ಮಡಿಕೇರಿ: ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ – ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ.
ನೀರಾವರಿ ಇಲಾಖೆ ಹಾರಂಗಿ ಜಲಾಶ ಯಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ ಅಲ್ಲದೇ ಹೆಚ್ಚಿನ ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದ ಎಲ್ಲಾಅಣೆಕಟ್ಟುಗಳಿಗೆ ಭದ್ರತೆ ಒದಗಿಸುವುದು ನಮ್ಮ ಕರ್ತವ್ಯ, ಈ ಸಮಯದಲ್ಲಿ ಜಾಗೃತರಾಗಿರಬೇಕೆಂದು ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗುತ್ತಿದೆ.