newsics.com
ನವದೆಹಲಿ: ನಾಲ್ಕು ದಿನಗಳ ಹಿಂದೆ ಮೇ 7ರಂದು ಭಾರತ ನಡೆಸಿದ ಆಪರೇಷನ್ ಸಿಂದೂರ್ ನಲ್ಲಿ 9 ಸ್ಥಳಗಳಲ್ಲಿ 100ಕ್ಕೂ ಹೆಚ್ಚು ಉಗ್ರರನ್ನು ಕೊಲ್ಲಲಾಗಿದೆ ಎಂದು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಹೇಳಿದ್ದಾರೆ.
ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಆಪರೇಷನ್ ಸಿಂದೂರ್ನಲ್ಲಿ ಹಲವು ಉಗ್ರರನ್ನು ಕೊಲ್ಲಲಾಗಿದೆ. ಲಷ್ಕರೆ ತೈಯಬಾದ ಮುದಾಸಿರ್, ಜೈಷೆ ಸಂಘಟನೆಯ ಉಗ್ರ ಹಫೀಜ್ ಮೊಹಮ್ಮದ್, ಬಹಾವಲ್ಪುರದ ಮರ್ಕಜ್ ಸಭಾನಲ್ಲಾದ ಉಸ್ತುವಾರಿ ಜಮೀಲ್, ಲಷ್ಕರೆ ತೈಬಾ ಉಗ್ರ ಖಾಲಿದ್ ಮೊದಲಾದವರು ಕಾರ್ಯಾಚರಣೆಯಲ್ಲಿ ಹತ್ಯೆಯಾಗಿರುವ ಸಂಗತಿಯನ್ನು ಡಿಜಿಎಂಒ ನೀಡಿದ್ದಾರೆ.
ಭಾರತವು ಪಾಕಿಸ್ತಾನದ ನಾಗರಿಕರನ್ನು ಗುರಿಯಾಗಿಸಿ ಯಾವುದೇ ದಾಳಿ ಮಾಡಿಲ್ಲ. ಆದರೆ, ಪಾಕಿಸ್ತಾನವು ಭಾರತದಲ್ಲಿ ನಾಗರಿಕರನ್ನು ಗುರಿಯಾಗಿಸಿ ದಾಳಿ ಮಾಡಿದೆ ಎಂದರು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು.
ಭಾರತದಲ್ಲಿ ಡಿಜಿಎಂಒ ಪಾತ್ರ ಏನು?
ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಇತರ ದೇಶಗಳ ಡಿಜಿಎಂಒಗಳ ಜೊತೆ ನೇರ ಸಂಪರ್ಕದಲ್ಲಿರುತ್ತಾರೆ. ಎರಡು ದೇಶಗಳ ಮಧ್ಯೆ ಅನಗತ್ಯವಾದ ಸಂಘರ್ಷ ಏರ್ಪಡದಂತೆ ನಿಯಂತ್ರಿಸುವುದು ಸೇರಿದಂತೆ ಹಲವು ಜವಾಬ್ದಾರಿಗಳು ಅವರಿಗೆ ಇರುತ್ತವೆ.
harassment ಅಶ್ಲೀಲವಾಗಿ ಮಹಿಳೆಯರ ಫೋಟೋ ಎಡಿಟ್ ಮಾಡಿ ಪೋಸ್ಟ್ ಮಾಡುತ್ತಿದ್ದ ಕಾಮುಕ ಅರೆಸ್ಟ್