newsics.com
ಶ್ರೀನಗರ : ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ವಿರುದ್ಧ ನಡೆಸಿದ ಆಪರೇಷನ್ ಸಿಂದೂರ್ ನಂತರ ಭಾರತ-ಪಾಕಿಸ್ತಾನ ಮಧ್ಯೆ ಯುದ್ಧ ನಡೆಯುತ್ತಿದೆ.ಅಪರೇಷನ್ ಸಿಂಧೂರ ಎಫೆಕ್ಟ್ ಪಾಕಿಸ್ತಾನದ ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರಿದೆ. ಭಾರತ ನಡೆಸಿದ ವಾಯುದಾಳಿಗೆ ಪತರುಗುಟ್ಟಿಹೋಗಿರುವ ಪಾಕ್ ತಾನು ನಂಬಿದ್ದ ಶಕ್ತಿಶಾಲಿ ಅಸ್ತ್ರಗಳಿಂದಲೇ ಶತಕೋಟಿ ನಷ್ಟ ಅನುಭವಿಸಿದೆ. ಇದರಿಂದ ಪಾಕಿಸ್ತಾನದ ಆರ್ಥಿಕ ಸ್ಥಿತಿ ಈಗಾಗಲೇ ಅಧೋಗತಿ ತಲುಪಿದ್ದು, ದಿವಾಳಿಯ ಆಗುವ ಹಂತಕ್ಕೆ ತಲುಪಿದೆ
ಭಾರತದ 40 ಸಿಆರ್‌ಪಿಎಫ್ ಯೋಧರನ್ನು ಬಲಿಪಡೆದ ಪುಲ್ವಾಮಾ ದಾಳಿ ಮಾಡಿಸಿದ್ದು ನಾವು ಎಂದು ಇದೇ ಮೊದಲ ಬಾರಿ ಪಾಕಿಸ್ತಾನ ಒಪ್ಪಿಕೊಂಡಿದೆ.
ಪಾಕಿಸ್ತಾನದ ಮಿಲಿಟರಿ ಅಧಿಕಾರಿಗಳು ನಡೆಸಿದ ಸುದ್ದಿಗೋಷ್ಠಿಯಲ್ಲಿ ಏರ್ ಮಾರ್ಷಲ್ ಔರಂಗಜೇಬ್ ಅಹ್ಮದ್ ಮಾತನಾಡಿ, ಪುಲ್ವಾಮಾ ಭಯೋತ್ಪಾದಕ ದಾಳಿಯು ಪಾಕಿಸ್ತಾನಿ ಮಿಲಿಟರಿಯ ʻಯುದ್ಧತಂತ್ರದ ಭಾಗʼ ಎಂದು ಹೇಳಿದ್ದಾರೆ. ಈ ಮೂಲಕ ಪುಲ್ವಾಮಾ ದಾಳಿಯಲ್ಲಿ ತನ್ನ ಪಾತ್ರವನ್ನು ಬಹಿರಂಗವಾಗಿ ಪಾಕ್ ಒಪ್ಪಿಕೊಂಡಿದೆ.
ಪಾಕಿಸ್ತಾನದ ವಾಯುಪ್ರದೇಶ, ಭೂಮಿ, ಜಲಪ್ರದೇಶಗಳು ಅಥವಾ ಇಲ್ಲಿನ ಜನರಿಗೆ ಬೆದರಿಕೆಯೊಡ್ಡಿದರೆ, ಯಾವುದೇ ರಾಜಿ ಸಾಧ್ಯವಿಲ್ಲ. ಅದನ್ನು ಗಮನಿಸದೆ ಬಿಡಲೂ ಸಾಧ್ಯವಿಲ್ಲ. ನಾವು ನಮ್ಮ ರಾಷ್ಟ್ರಕ್ಕೆ ಋಣಿಯಾಗಿದ್ದೇವೆ. ಪಾಕಿಸ್ತಾನಿ ಜನರು ತಮ್ಮ ಸಶಸ್ತ್ರ ಪಡೆಗಳ ಬಗ್ಗೆ ಹೊಂದಿರುವ ಹೆಮ್ಮೆ ಮತ್ತು ನಂಬಿಕೆಯನ್ನ ನಾವು ಯಾವಾಗಲೂ ಎತ್ತಿಹಿಡಿಯುತ್ತೇವೆ. ಪುಲ್ವಾಮಾದಲ್ಲಿ ನಮ್ಮ ಯುದ್ಧತಂತ್ರದ ಪ್ರತಿಭೆಯ ಮೂಲಕ ನಾವು ಅದನ್ನು ತಿಳಿಸಲು ಪ್ರಯತ್ನಿಸಿದ್ದೇವೆ. ಈಗಲೂ ನಮ್ಮ ಕಾರ್ಯಾಚರಣೆ ಮತ್ತು ಕಾರ್ಯತಂತ್ರವನ್ನು ಪ್ರದರ್ಶಿಸಿದ್ದೇವೆ. ಇದನ್ನ ಅವರು ಕೂಡ ಗಮನಿಸಿರುತ್ತಾರೆ ಅಂತ ಭಾವಿಸುತ್ತೇನೆ ಎಂದು ಹೇಳಿದ್ದಾರೆ.