newsics.com
ರಾಯಚೂರು: ನಾಲ್ಕು ವರ್ಷದ ಬಾಲಕಿ ಮೇಲೆ ಸಂಬಂಧಿಯೇ ಅತ್ಯಾಚಾರವೆಸಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿ ಮೇಲೆ 25 ವರ್ಷದ ಯುವಕ ಅತ್ಯಾಚಾರವೆಸಗಿದ್ದಾನೆ. ಬಾಲಕಿಗೆ 5 ರೂಪಾಯಿ ಹಣ ಕೊಟ್ಟು ಪುಸಲಾಯಿಸಿ ಪೈಶಾಚಿಕ ಕೃತ್ಯವೆಸಗಿದ್ದಾನೆ.
ಮರುದಿನ ಬಾಲಕಿಗೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ.
ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಬಳಗಾನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
Relationship ಗಂಡನಾದವನು ಹೆಂಡತಿಯನ್ನು ಕೇಳದೆ ಈ ಕೆಲಸಗಳನ್ನು ಮಾಡಬಾರದು!: ಯಾಕೆ?