newsics.com
ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆಯಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2025ರ ಆವೃತ್ತಿ ಮೇ 17 ರಿಂದ ಪುನರಾರಂಭವಾಗಲಿದೆ ಎಂದು ಬಿಸಿಸಿಐ ಸ್ಙಷ್ಟಪಡಿಸಿದೆ. ಸೋಮವಾರ (ಮೇ 12) ತಡಾರಾತ್ರಿ ಈ ಆದೇಶ ಹೊರಡಿಸಿರುವ ಬಿಸಿಸಿಐ ಐಪಿಎಲ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದೆ.
ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಅದರಂತೆ ಐಪಿಎಲ್ ನಿಂತು ಮತ್ತೆ ಪುನರ್ ಆರಂಭಗೊಂಡರೂ ಆ ಎರಡು ತಂಡಗಳೇ ಮುಖಾಮುಖಿಯಾಗುತ್ತಿವೆ.
ಮೇ 17 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಮತ್ತು ಕೆಕೆಆರ್ ತಂಡಗಳು ಮುಖಾಮುಖಿಯಾಗಲಿವೆ.
https://x.com/MeghUpdates/status/1921974534967566520?t=Q0OtgU0EjRrZK1lS6bQ4VA&s=19