newsics.com
ಬೆಂಗಳೂರು : ಮುಂದಿನ 3-4 ದಿನ ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.