newsics.com
ಬೆಂಗಳೂರು: 108 ಆಂಬುಲೆನ್ಸ್ ಗಳ ನಿರ್ವಹಣೆಯನ್ನ ಖಾಸಗಿ ಏಜನ್ಸಿಗಳ ಹಿಡಿತದಿಂದ ತಪ್ಪಿಸಿ ರಾಜ್ಯ ಸರ್ಕಾರ ತನ್ನ ಹಿಡಿತಕ್ಕೆ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಂದಿನ ತಿಂಗಳಲ್ಲಿ ರಾಜ್ಯದ ಎಲ್ಲ ಸ್ಟೇಟ್ ಆಂಬುಲೆನ್ಸ್‌ಗಳನ್ನು ಇಲಾಖೆ ತನ್ನ ನಿರ್ವಹಣೆಯ ವ್ಯಾಪ್ತಿಗೆ ತೆಗೆದುಕೊಳ್ಳಲಿದೆ. ಮೂರು ತಿಂಗಳ ಒಳಗಾಗಿ 108 ಆಂಬುಲೆನ್ಸ್‌ಗಳನ್ನು ಆರೋಗ್ಯ ಇಲಾಖೆ ತನ್ನ ಕಮಾಂಡ್ ಕಂಟ್ರೋಲ್ ಸೆಂಟರ್ ವ್ಯಾಪ್ತಿಗೆ ತೆಗೆದುಕೊಂಡು ನಿರ್ವಹಣೆ ಕಾರ್ಯ ಕೈಗೆತ್ತಿಕೊಳ್ಳಲಿದೆ ಎಂದರು.
ಬೆಂಗಳೂರಿನಲ್ಲಿ ಒಂದು ಕಮಾಂಡ್ ಸೆಂಟರ್ ಹಾಗೂ ಪ್ರತಿ ಜಿಲ್ಲೆಗಳಲ್ಲೂ ಪ್ರತ್ಯೇಕ ಕಮಾಂಡ್ ಸೆಂಟರ್‌ಗಳನ್ನು ರಚಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
108 ಆಂಬುಲೆನ್ಸ್ ಗಳನ್ನು ಈವರೆಗೆ ಖಾಸಗಿ ಏಜೆನ್ಸಿಗಳು ನಿರ್ವಹಿಸುತ್ತಿದ್ದವು. ಈಗಿನ ವ್ಯವಸ್ಥೆಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದವು. ಹೀಗಾಗಿ ಇನ್ಮುಂದೆ ರಾಜ್ಯ ಸರ್ಕಾರವೇ 108 ಅಂಬ್ಯುಲೆನ್ಸ್ ಗಳ ನಿರ್ವಹಣೆಗೆ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದ್ದು, ಈಗಾಗಲೇ ಚಾಮರಾಜನಗರ ಜಿಲ್ಲೆಯಲ್ಲಿ ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿಯಾಗಿ ನಡೆಸಲಾಗಿದೆ ಎಂದರು
ಖಾಸಗಿ ಏಜನ್ಸಿಯಿಂದ ಇದರ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿರಲಿಲ್ಲ. ಸರ್ಕಾರದಿಂದ ಏಜನ್ಸಿಗೆ ಹಣ ಪಾವತಿಯಾದರೂ, ಆಂಬುಲೆನ್ಸ್ ಸಿಬ್ಬಂದಿಗೆ ಸರಿಯಾದ ಸಮಯಕ್ಕೆ ವೇತನ ಪಾವತಿಯಾಗುತ್ತಿರಲಿಲ್ಲ
ಏಜನ್ಸಿಯ ಬದಲು ಆರೋಗ್ಯ ಇಲಾಖೆಯೇ ನಡೆಸಿದರೆ ಸರ್ಕಾರದ ಬೊಕ್ಕಸಕ್ಕೂ ನೂರಾರು ಕೋಟಿ ಹಣ ಉಳಿತಾಯವಾಗಲಿದೆ. ಅಲ್ಲದೇ ವ್ಯವಸ್ಥೆಯಲ್ಲೂ ಸುಧಾರಣೆ ತರಬಹುದು ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.
Sampath found dead ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಸಂಪತ್ ಶವವಾಗಿ ಪತ್ತೆ, ಕೊಲೆ ಶಂಕೆ
Gang rape ಮಾತು ಬಾರದ, ಕಿವಿ ಕೇಳದ ಬಾಲಕಿ ಮೇಲೆ ಆಸ್ಪತ್ರೆಯಲ್ಲೇ ಅತ್ಯಾಚಾರ! ಚಿತ್ರಹಿಂಸೆ ನೀಡಿ ಹತ್ಯೆ