newsics.com
ಬೆಂಗಳೂರು: ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು, ಮಿಂಚು, ಗಾಳಿ ಸಹಿತ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಈ ಬಾರಿ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದೆ. ಹಲವೆಡೆ ಉತ್ತಮ ಮಳೆಯಾಗ್ತಿದೆ. ಬೇಸಿಗೆಯಲ್ಲೂ ಮಳೆರಾಯ ಕೃಪೆ ತೋರಿದ್ದಾನೆ. ಇಳೆಯನ್ನು ತಂಪಾಗಿಸಿದ್ದಾರೆ. ಬೆಂಗಳೂರಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗ್ತಿದೆ. ಇನ್ನು ಮೇ 14, 15 ರಂದು ಕೂಡ ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಮತ್ತು ನಾಳೆ ರಾಜ್ಯದ 17 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾವೇರಿ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.