newsics.com
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದ ನಾದಿರ್ ಗ್ರಾಮದಲ್ಲಿ ಗುರುವಾರ ಮುಂಜಾನೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.
ಜೈಶ್-ಎ-ಮೊಹಮ್ಮದ್ಗೆ ಸೇರಿದ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆ ಹೊಡೆದುರುಳಿಸಲಾಗಿದೆ.
ಮಂಗಳವಾರ ಕೊಲ್ಲಲ್ಪಟ್ಟ ಮೂವರು ಭಯೋತ್ಪಾದಕರಲ್ಲಿ, ಹತ್ಯೆಗೀಡಾದ ಇಬ್ಬರು ಭಯೋತ್ಪಾದಕರನ್ನು ಶಾಹಿದ್ ಕುಟ್ಟಯ್ ಮತ್ತು ಅದ್ನಾನ್ ಶಫಿ ಎಂದು ಗುರುತಿಸಲಾಗಿದೆ, ಇಬ್ಬರೂ ಶೋಪಿಯಾನ್ ನಿವಾಸಿಗಳು. 2023 ರಲ್ಲಿ ಲಷ್ಕರ್‌ಗೆ ಸೇರಿದ ಕುಟ್ಟಯ್, ಕಳೆದ ವರ್ಷ ಏಪ್ರಿಲ್ 8 ರಂದು ಡ್ಯಾನಿಶ್ ರೆಸಾರ್ಟ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ, ಇದರಲ್ಲಿ ಇಬ್ಬರು ಜರ್ಮನ್ ಪ್ರವಾಸಿಗರು ಮತ್ತು ಒಬ್ಬ ಚಾಲಕ ಗಾಯಗೊಂಡಿದ್ದರು.