newsics.com
ಬೆಂಗಳೂರು: ರಾಜ್ಯದಲ್ಲಿ ಮೇ 21ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ 3 ಜಿಲ್ಲೆಗಳು, ಉತ್ತರ ಒಳ ನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳ ನಾಡಿನ, ಬಳ್ಳಾರಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತಮಕೂರು, ವಿಜಯನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.