newsics.com
ನವದೆಹಲಿ : ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ವಿರುದ್ಧ ನಡೆಸಿದ ಆಪರೇಷನ್ ಸಿಂದೂರ್ ಕಾರ್ಯಾಚರಣೆಯನ್ನು ಸಮರ್ಥಿಸಿಕೊಂಡಿದ್ದ ತಿರುವನಂತಪುರಂ ಸಂಸದ ಹಾಗೂ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರಿಗೆ ಇದೀಗ ಕೇಂದ್ರ ಸರ್ಕಾರ ಮಹತ್ವದ ಜವಾಬ್ದಾರಿ ನೀಡಲು ಮುಂದಾಗಿದೆ.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ಶಿಬಿರಗಳ ವಿರುದ್ಧ ಭಾರತ ನಡೆಸಿದ ಆಪರೇಷನ್ ಸಿಂಧೂರ್ ನಂತರ ನಡೆಯುತ್ತಿರುವ ಪ್ರಮುಖ ಸಂಪರ್ಕ ಕಾರ್ಯಾಚರಣೆಯನ್ನು ಕೈಗೊಳ್ಳಲು ಸರ್ಕಾರ ಶನಿವಾರ ತರೂರ್ ಮತ್ತು ವಿರೋಧ ಪಕ್ಷದ ಇಬ್ಬರು ಮತ್ತು ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ನಾಲ್ವರು ಸೇರಿದಂತೆ ಆರು ಇತರ ಸಂಸದರನ್ನುಈ ನಿಯೋಗದಲ್ಲಿ ಹೆಸರಿಸಿದೆ.
ಭಯೋತ್ಪಾದನೆ ವಿರುದ್ಧ ಜಾಗತಿಕ ಮಟ್ಟದಲ್ಲಿ ಭಾರತದ ನಡೆಯನ್ನು ಸಮರ್ಥಿಸಿಕೊಳ್ಳಲು ವಿವಿಧ ಪಕ್ಷಗಳ 5-6 ಸಂಸದರನ್ನು ಒಳಗೊಂಡ ಬಹುಪಕ್ಷೀಯ ನಿಯೋಗಗಳನ್ನು ಕೇಂದ್ರ ರಚಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಯೊಂದು ಹೇಳಿದೆ.