newsics.com
ನವದೆಹಲಿ: ಭಾರತ-ಪಾಕ್ ಯುದ್ಧದ ವೇಳೆ ಪಾಕಿಸ್ತಾನವನ್ನು ಬೆಂಬಲಿಸಿದ ಟರ್ಕಿ,ಅಜರ್‌ಬೈಜಾನ್ ವಿರುದ್ಧ ಬಾಯ್ಕಾಟ್ ಅಭಿಯಾನ ಆರಂಭವಾಗಿದೆ.
ದೇಶಾದ್ಯಂತ 125ಕ್ಕೂ ಹೆಚ್ಚು ಉನ್ನತ ವ್ಯಾಪಾರಿಗಳು ಟರ್ಕಿ ಮತ್ತು ಅಜರ್‌ಬೈಜಾನ್‌ನೊಂದಿಗಿನ ಪ್ರಯಾಣ, ಪ್ರವಾಸೋದ್ಯಮ ಸೇರಿದಂತೆ ಎಲ್ಲಾ ರೀತಿಯ ವ್ಯಾಪಾರ, ವಾಣಿಜ್ಯ ಒಪ್ಪಂದಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ.
24 ರಾಜ್ಯಗಳ ಪ್ರತಿನಿಧಿಗಳು ಭಾಗವಹಿಸಿದ್ದ, ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ) ಆಯೋಜಿಸಿದ್ದ ವ್ಯಾಪಾರಸ್ಥರ ರಾಷ್ಟ್ರೀಯ ಸಮ್ಮೇಳನದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ನೆಟ್‌ಫ್ಲಿಕ್ಸ್, ಪ್ರೈಮ್ ವಿಡಿಯೋ ಮತ್ತು ಜಿಯೋಹಾಟ್‌ಸ್ಟಾರ್ ಸೇರಿದಂತೆ ಎಲ್ಲ ಪ್ಲಾಟ್‌ಫಾರ್ಮ್‌ಗಳು ಟರ್ಕಿ ಸಿನಿಮಾಗಳನ್ನು ಬಹಿಷ್ಕರಿಸುವಂತೆ ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್ (ಎಫ್‌ಡಬ್ಲುಐಸಿಇ) ಒತ್ತಾಯಿಸಿದೆ. ಇನ್ನೊಂದೆಡೆ ಎರಡೂ ದೇಶಗಳ ಜೊತೆಗಿನ ಎಲ್ಲಾ ವ್ಯವಹಾರ ವಹಿವಾಟುಗಳನ್ನು ಸ್ಥಗಿತಗೊಳಿಸುವಂತೆ ಉದ್ಯಮಿಗಳಿಗೆ ಅಖಿಲ ಭಾರತ ರತ್ನ ಮತ್ತು ಆಭರಣ ದೇಶೀಯ ಮಂಡಳಿ (ಜಿಜೆಸಿ) ಒತ್ತಾಯಿಸಿದೆ. ಇನ್ನು, ಉತ್ತರ ಪ್ರದೇಶದ ಛತ್ರಪತಿ ಶಾಹುಜಿ ಮಹಾರಾಜ್ ವಿವಿ ಹಾಗೂ ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ವಿವಿಗಳು ಟರ್ಕಿ ವಿವಿಗಳ ಜತೆಗಿನ ತಿಳಿವಳಿಕೆ ಒಪ್ಪಂದವನ್ನು (ಎಂಒಯು) ತಕ್ಷಣವೇ ರದ್ದುಗೊಳಿಸುವುದಾಗಿ ಘೋಷಿಸಿವೆ.