newsics.com
ಆಂಧ್ರಪ್ರದೇಶದಲ್ಲಿ ಕಾರು ಬಾವಿಗೆ ಉರುಳಿದ ಪರಿಣಾಮ ಕರ್ನಾಟಕದ ಮೂವರು ಸಾವನ್ನಪ್ಪಿದ್ದಾರೆ.
ಆಂಧ್ರದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿ ಭಾನುವಾರ ಈ ಘಟನೆ ನಡೆದಿದೆ.
ಚಿಂತಾಮಣಿ ತಾಲೂಕಿನ ಮುತ್ತಕದಲ್ಲಿ ಗ್ರಾಮದ ನಿವಾಸಿಗಳಾದ ಲೊಕೇಶ(34), ಚಂದನಹಳ್ಳಿ ಗ್ರಾಮದ ಶಿವಾನಂದ, ಕೋಲಾರ ಜಿಲ್ಲೆಯ ಸುಗಟೂರು ಗ್ರಾಮದ ಚಲಪತಿ ಮೃತಪಟ್ಟವರು. ಇಬ್ಬರು ಪ್ರಾಣಾಪಾದಿಂದ ಪಾರಾಗಿದ್ದಾರೆ.
ಅಡುಗೆ ಕೆಲಸಕ್ಕೆಂದು ಕಾರಿನಲ್ಲಿ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಪಿಲೇರು ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ಸಂಭವಿಸಿದೆ. ಕಾರಿನಲ್ಲಿ ಒಟ್ಟು ಐವರು ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ.
ಸ್ಥಳೀಯರು, ಪೊಲೀಸರು ಸೇರಿ ಬಾವಿಯಲ್ಲಿ ಬಿದ್ದಿದ್ದ ಕಾರನ್ನು ಮೇಲಕ್ಕೆತ್ತಿದರು. ಹಗ್ಗಗಳನ್ನು ಹಾಕಿ ಕಾರನ್ನು ಮೇಲೆತ್ತಲು ಪ್ರಯತ್ನಿಸಿದರು. ಪ್ರಯೋಜನವಾಗದ್ದರಿಂದ ಬಳಿಕ ಕ್ರೇನ್ ಮೂಲಕ ಕಾರನ್ನು ಹೊರತೆಗೆಲಾಯಿತು.
Actress Nusrat arrested ಶೇಖ್ ಹಸೀನಾ ಪಾತ್ರಧಾರಿ ನಟಿ ನುಸ್ರತ್ ಬಂಧನ
Robotics Education 10ನೇ ತರಗತಿ ಎಲ್ಲಾ ವಿದ್ಯಾರ್ಥಿಗಳಿಗೆ ರೊಬೊಟಿಕ್ಸ್ ಶಿಕ್ಷಣ ಕಡ್ಡಾಯಗೊಳಿಸಿದ ಕೇರಳ ಸರ್ಕಾರ
Gold Rate Today: ಚಿನ್ನದ ಬೆಲೆಯಲ್ಲಿ ಇಳಿಕೆ – ಹೀಗಿದೆ ಇಂದಿನ ಬಂಗಾರ-ಬೆಳ್ಳಿ ದರ