newsics.com
ನವದೆಹಲಿ : ಪತಿಯೊಬ್ಬ ತನ್ನ ಪತ್ನಿಯನ್ನು ತಲೆಕೆಳಗಾಗಿ ನೇತುಹಾಕಿದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಈ ಘಟನೆಯ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ವೈರಲ್ ವಿಡಿಯೋದಲ್ಲಿ, ಮಹಿಳೆಯನ್ನು ಮನೆಯ ಮೇಲೆನಿಂದ ತಲೆಕೆಳಗಾಗಿ ನೇತುಹಾಕಲಾಗಿದ್ದು, ಐದು ನಿಮಿಷಗಳ ಕಾಲ ಹಾಗೆಯೇ ಬಿಟ್ಟಿದ್ದಾನೆ.ಮಹಿಳೆಯ ಕಿರುಚಾಟ ಕೇಳಿ ನೆರೆಹೊರೆಯವರು ಧಾವಿಸಿ ಬಂದ ನಂತರ ಆಕೆಯನ್ನು ರಕ್ಷಿಸಲಾಗಿದೆ.ಈ ಸಂಬಂಧ ಪೊಲೀಸರು ಪತಿ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.