newsics.com
ರಾಯಚೂರು: ಬೆಳ್ಳಂಬೆಳಗ್ಗೆ ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಡಾ. ಜಾಕೀರ್ ಹುಸೇನ್ ವೃತ್ತದಲ್ಲಿ ನಡೆದಿದೆ.
ಯುವಕನ ಕೊಲೆ ನಡೆದಿದೆ. ಜಹೀರಾಬಾದ್‌ನ ಬಡಾವಣೆಯ ಸಾದಿಕ್ (27) ಹತ್ಯೆಯಾದ ಯುವಕ. ಘಟನೆ ಸಂಬಂಧ ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನುಳಿದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕರೀಂ ಬಂಧಿತನಾದ ಆರೋಪಿ. ಬೆಳಗ್ಗೆ ನಾಲ್ಕು ಗಂಟೆಗೆ ಇಡ್ಲಿ ತಿನ್ನಲು ಸಾದಿಕ್ ಮನೆಯಿಂದ ಹೊರಗೆ ಬಂದಿದ್ದ. ಈ ವೇಳೆ ದಾಳಿ ಮಾಡಿ ಕೊಲೆಗೈಯ್ಯಲಾಗಿದೆ. ಆರೋಪಿಗಳು ಸಾದಿಕ್ ದೇಹಕ್ಕೆ ಚಾಕುವಿನಿಂದ ಮನಬಂದಂತೆ ಇರಿದು ಕೊಲೆ ಮಾಡಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಾದಿಕ್ನನ್ನು ಆಸ್ಪತ್ರೆಗೆ ಸಾಗಿಸುತ್ತಿರುವಾಗ, ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.