newsics.com
ಬೆಂಗಳೂರು: ಕನ್ನಡ ಮಾತಾಡಿ ಎಂದು ಹೇಳಿದ್ದಕ್ಕೆ,ಉಡಾಫೆ ಮಾತುಗಳನ್ನಾಡಿದ ಘಟನೆ ಒಂದು ಬೆಂಗಳೂರಿನ ಚಂದಾಪುರದ ಎಸ್‌ಬಿಐ ಬ್ಯಾಂಕ್‌ನಲ್ಲಿ ನಡೆದಿದೆ.
ಚಂದಾಪುರದ ಸೂರ್ಯಸಿಟಿಯ ಎಸ್‌ಬಿಐ ಬ್ಯಾಂಕ್ ಮ್ಯಾನೇಜರ್ ಕನ್ನಡ ಮಾತಾಡಲ್ಲ ಎಂದು ಊಡಾಫೆ ವರ್ತನೆ ತೋರಿದ್ದಾರೆ. ಕನ್ನಡಿಗರನ್ನು ಕೆರಳಿಸುವ ರೀತಿಯಲ್ಲಿ ಮಾತನಾಡಿದ್ದಾರೆ. ಕನ್ನಡ ಮಾತಾಡು ಎಂದ ಗ್ರಾಹಕನಿಗೆ ಹಿಂದಿ ಮಾತಾಡ್ತೇನೆ, ನಾನು ಕನ್ನಡ ಮಾತನಾಡಲ್ಲ ಎಂದು ಉಡಾಫೆ ಉತ್ತರ ನೀಡಿದ್ದಾರೆ. ಕನ್ನಡ ಮಾತನಾಡಿ ಎಂದಿದ್ದಕ್ಕೆ ಇದು ಇಂಡಿಯಾ ನಾನು ಹಿಂದಿಯನ್ನೇ ಮಾತನಾಡುತ್ತೇನೆ ಎಂದು ಬ್ಯಾಂಕ್ ಮ್ಯಾನೇಜರ್ ಉಡಾಫೆಯಾಗಿ ಮಾತನಾಡಿರುವ ವಿಡಿಯೋವನ್ನು ಗ್ರಾಹಕರು ಚಿತ್ರೀಕರಿಸಿ ಅದನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.