newsics.com
ನವದೆಹಲಿ: 2,200 ಕೋಟಿ ರೂಪಾಯಿ ಮೌಲ್ಯದ ಕಿರು ಜಲವಿದ್ಯುತ್ ಯೋಜನೆ ಮಂಜೂರು ಮಾಡುವಲ್ಲಿ ನಡೆದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಮತ್ತು ಇತರ ಐವರ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಮೂರು ವರ್ಷಗಳ ತನಿಖೆಯ ನಂತರ ವಿಶೇಷ ನ್ಯಾಯಾಲಯದ ಮುಂದೆ ಸಿಬಿಐ ತನ್ನ ಆರೋಪಪಟ್ಟಿಯನ್ನು ಸಲ್ಲಿಸಿದ್ದು, ಮಲಿಕ್ ಮತ್ತು ಅವರ ಇಬ್ಬರು ಸಹಾಯಕರಾದ ವೀರೇಂದ್ರ ರಾಣಾ ಮತ್ತು ಕನ್ವರ್ ಸಿಂಗ್ ರಾಣಾ ಅವರನ್ನು ಹೆಸರಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಳೆದ ವರ್ಷ ಫೆಬ್ರವರಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಿಕ್ ಮತ್ತು ಇತರರ ನಿವಾಸಗಳಲ್ಲಿ ಸಿಬಿಐ ಶೋಧ ನಡೆಸಿತ್ತು. ಆಗಸ್ಟ್ 23, 2018 ರಿಂದ ಅಕ್ಟೋಬರ್ 30, 2019 ರವರೆಗೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ಮಲಿಕ್, ಯೋಜನೆಗೆ ಸಂಬಂಧಿಸಿದ ಒಂದು ಫೈಲ್ ಸೇರಿದಂತೆ ಎರಡು ಫೈಲ್‌ಗಳಿಗೆ ಸಹಿ ಹಾಕಲು ತಮಗೆ 300 ಕೋಟಿ ರೂ. ಲಂಚದ ಆಫರ್ ನೀಡಲಾಗಿತ್ತು ಎಂದು ಹೇಳಿಕೊಂಡಿದ್ದರು
ಸಿಬಿಐ ಚಾರ್ಜ್‌ಶೀಟ್ ಸಲ್ಲಿಕೆ ಬೆನ್ನಲ್ಲೇ ಮಲಿಕ್ ಅವರ ಎಕ್ಸ್ ಖಾತೆಯಿಂದ ಪೋಸ್ಟ್‌ವೊಂದು ಬಂದಿದೆ. ‘ನನ್ನ ಅನೇಕ ಹಿತೈಷಿಗಳಿಂದ ನನಗೆ ಕರೆಗಳು ಬರುತ್ತಿವೆ. ಆದರೆ ನಾನು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ.