newsics.com
ತಂಜಾವೂರ್ : ತಮಿಳುನಾಡಿನ ತಂಜಾವೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ತಂಜಾವೂರು-ತಿರುಚಿರಪಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೆಂಗಿಪ್ಪತ್ತಿ ಸೇತುವೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಟೆಂಪೋ ವ್ಯಾನ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ ಎಂದು ತಂಜಾವೂರು ಜಿಲ್ಲಾಧಿಕಾರಿ ಪ್ರಿಯಾಂಕಾ ಬಾಲಸುಬ್ರಮಣಿಯನ್ ತಿಳಿಸಿದ್ದಾರೆ.