Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > No drone flying allowed in Tirupati ತಿರುಪತಿಯಲ್ಲಿನ್ನು ಡ್ರೋನ್ ಹಾರಾಟಕ್ಕಿಲ್ಲ ಅವಕಾಶ, ಡ್ರೋನ್ ನಿರೋಧಕ ತಂತ್ರಜ್ಞಾನ ಬಳಕೆಗೆ ಟಿಟಿಡಿ ನಿರ್ಧಾರ
ದೇಶಪ್ರಮುಖ

No drone flying allowed in Tirupati ತಿರುಪತಿಯಲ್ಲಿನ್ನು ಡ್ರೋನ್ ಹಾರಾಟಕ್ಕಿಲ್ಲ ಅವಕಾಶ, ಡ್ರೋನ್ ನಿರೋಧಕ ತಂತ್ರಜ್ಞಾನ ಬಳಕೆಗೆ ಟಿಟಿಡಿ ನಿರ್ಧಾರ

Share
3 Min Read
SHARE

newsics.com

ತಿರುಪತಿ: ವಿಶ್ವದ ಅತ್ಯಂತ ಶ್ರೀಮಂತ ಹಿಂದೂ ದೇವಾಲಯವಾದ ತಿರುಮಲ ತಿರುಪತಿ ದೇವಸ್ಥಾನದ ಭದ್ರತೆಯನ್ನು ಹೆಚ್ಚಿಸಲಾಗುತ್ತಿದ್ದು, ಡ್ರೋನ್ ನಿರೋಧಕ ತಂತ್ರಜ್ಞಾನವನ್ನು ಬಳಸಲು ಯೋಜನೆ ರೂಪಿಸಲಾಗಿದೆ.

ತಿರುಪತಿ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಭವಿಷ್ಯದಲ್ಲಿ ಬೆದರಿಕೆ ಬರುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಡ್ರೋನ್ ವಿರೋಧಿ ತಂತ್ರಜ್ಞಾನವನ್ನು ದೇವಾಲಯದ ರಕ್ಷಣೆಗಾಗಿ ಬಳಸಲು ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ಟಿಟಿಡಿ (TTD) ಪ್ರಕಟಣೆಯಲ್ಲಿ ತಿಳಿಸಿದೆ.

ತಿರುಮಲ ದೇವಸ್ಥಾನದ ಭದ್ರತಾ ಅಂಶವನ್ನು ಗಮನದಲ್ಲಿಟ್ಟುಕೊಂಡು ಡ್ರೋನ್ ವಿರೋಧಿ ತಂತ್ರಜ್ಞಾನವನ್ನು ಬಳಸಲು ನಿರ್ಧರಿಸಿರುವುದಾಗಿ ಹೇಳಿದೆ.

ಟಿಟಿಡಿ ಮಂಡಳಿಯ ಅಧ್ಯಕ್ಷ ಬಿ.ಆರ್. ನಾಯ್ಡು ಅಧ್ಯಕ್ಷತೆಯಲ್ಲಿ ನಡೆದ ಟಿಟಿಡಿ ಟ್ರಸ್ಟ್ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೆಟ್ಟದ ಮೇಲೆ ದೇವಾಲಯದ ಸುತ್ತಲೂ ಡ್ರೋನ್‌ಗಳನ್ನು ಹಾರಿಸುವುದನ್ನು ನಿಷೇಧಿಸಲಾಗಿದೆ. ಆದರೆ ಇತ್ತೀಚೆಗೆ ಕೆಲವು ಭದ್ರತಾ ಉಲ್ಲಂಘನೆಗಳ ವರದಿಯಾಗಿದೆ. ಕಳೆದ ತಿಂಗಳು ರಾಜಸ್ಥಾನದ ಯುಟ್ಯೂಬರ್ ಒಬ್ಬ ಡ್ರೋನ್ ಹಾರಿಸಿದ್ದ. ಬಳಿಕ ಆತನನ್ನು ಬಂಧಿಸಲಾಗಿತ್ತು. ಆತ ದೇವಾಲಯ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳನ್ನು ಕ್ಯಾಮೆರಾದಲ್ಲಿ ರೆಕಾರ್ಡ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಕಳೆದ ವರ್ಷ ಹರಿಯಾಣದ ದಂಪತಿ ತಿರುಮಲ ಘಾಟ್ ರಸ್ತೆಯ ಉದ್ದಕ್ಕೂ ಡ್ರೋನ್ ಕೆಮರಾ ಬಳಸಿದ್ದರು. ದೇವಾಲಯದ ಸುತ್ತಮುತ್ತ ಪದೇ ಪದೆ ಡ್ರೋನ್ ಹಾರಾಟ ಪ್ರಕರಣ ನಡೆಯುತ್ತಿರುವುದರಿಂದ ಕಳೆದ ಮಾರ್ಚ್‌ನಲ್ಲಿ ಬೆಟ್ಟದ ದೇವಾಲಯದ ಮೇಲೆ ಡ್ರೋನ್ ಹಾರಾಟ ನಿಷೇಧಿತ ವಲಯವೆಂದು ಘೋಷಿಸುವಂತೆ ಟಿಟಿಡಿ ಕೇಂದ್ರವನ್ನು ಒತ್ತಾಯಿಸಿತು.

ಈ ಕುರಿತು ಟಿಟಿಡಿ ಅಧ್ಯಕ್ಷ ಬಿ.ಆರ್.ನಾಯ್ಡು ಮಾತನಾಡಿ, ಕೇಂದ್ರ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು ಅವರಿಗೆ ಪತ್ರ ಬರೆದು ಆಗಮ ಶಾಸ್ತ್ರದ ತತ್ತ್ವಗಳು, ದೇವಾಲಯದ ಪಾವಿತ್ರ್ಯ, ಸುರಕ್ಷತೆ ಮತ್ತು ಭಕ್ತರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ತಿರುಮಲವನ್ನು ವಿಮಾನ ಹಾರಾಟ ನಿಷೇಧಿತ ವಲಯವೆಂದು ಘೋಷಿಸಬೇಕೆಂದು ಮನವಿ ಮಾಡಿದ್ದರು.

ಬೆಟ್ಟದ ಮೇಲಿನ ವೈಮಾನಿಕ ಚಟುವಟಿಕೆಗಳು ದೇವಾಲಯದ ಸುತ್ತಲಿನ ಪವಿತ್ರ ವಾತಾವರಣವನ್ನು ಭಂಗಗೊಳಿಸುತ್ತವೆ ಎಂದು ಟಿಟಿಡಿ ಹೇಳಿದೆ.
ಅಲ್ಲದೆ, ಟಿಟಿಡಿಯಲ್ಲಿ ಕೆಲಸ ಮಾಡುವ ಹಿಂದೂಯೇತರ ನೌಕರರನ್ನು ಪರ್ಯಾಯ ಮಾರ್ಗಗಳ ಮೂಲಕ ಅಥವಾ ಅವರಿಗೆ ಸ್ವಯಂಪ್ರೇರಿತ ನಿವೃತ್ತಿ ಯೋಜನೆ ನೀಡುವ ಮೂಲಕ ವರ್ಗಾವಣೆ ಮಾಡುವ ಕ್ರಮಗಳಿಗೆ ಅನುಮೋದನೆ ನೀಡಲಾಗಿದೆ.

ಡಿಡಿ ನೆಕ್ಸ್ಟ್ ಲೆವೆಲ್ ಚಿತ್ರದ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ದೇವಾಲಯ ಮಂಡಳಿ ನಿರ್ಧರಿಸಿದೆ. ಚಿತ್ರದಲ್ಲಿ ಗೋವಿಂದ ನಾಮಾವಳಿಯನ್ನು ರಿಮಿಕ್ಸ್ ಮಾಡಿ ಭಕ್ತರ ಭಾವನೆಗಳಿಗೆ ನೋವುಂಟು ಮಾಡಲಾಗಿದೆ ಎಂದು ಹೇಳಿದೆ.

ತಿರುಮಲ ಬೆಟ್ಟಗಳಲ್ಲಿ ಹಸಿರು ಹೊದಿಕೆಯನ್ನು ಹೆಚ್ಚಿಸಲು ಆಡಳಿತ ಮಂಡಳಿ ನಿರ್ಧರಿಸಿದೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ನಿರ್ದೇಶನದಂತೆ ಅರಣ್ಯ ಇಲಾಖೆಯ ಮೂಲಕ ತಿರುಮಲ ಬೆಟ್ಟಗಳಲ್ಲಿ ಹಸಿರು ಹೊದಿಕೆಯನ್ನು ಈಗಿರುವ ಶೇ. 68.14ರಿಂದ ಶೇ. 80ಕ್ಕೆ ಹೆಚ್ಚಿಸಲು ಮಂಡಳಿಯು ಅನುಮೋದನೆ ನೀಡಿದೆ.

ಇದಕ್ಕಾಗಿ ಟಿಟಿಡಿ ಅರಣ್ಯ ಇಲಾಖೆಗೆ ಹಂತ ಹಂತವಾಗಿ 4 ಕೋಟಿ ರೂ. ಬಿಡುಗಡೆ ಮಾಡಲಿದೆ. ಇದರಲ್ಲಿ 2025-26ನೇ ಸಾಲಿಗೆ 1.74 ಕೋಟಿ ರೂ., 2026-27ರಲ್ಲಿ 1.13 ಕೋಟಿ ರೂ. ಮತ್ತು 2027-28 ರಲ್ಲಿ 1.13 ಕೋಟಿ ರೂ. ಸೇರಿವೆ.

ಬಡವರು ಮತ್ತು ನಿರ್ಗತಿಕರಿಗೆ ಉತ್ತಮ ವೈದ್ಯಕೀಯ ಸೇವೆಗಳನ್ನು ಒದಗಿಸುತ್ತಿರುವ ಸ್ವಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಪ್ರಸ್ತುತ ನೀಡಲಾಗುತ್ತಿರುವ 60 ಕೋಟಿ ರೂ. ಆರ್ಥಿಕ ನೆರವಿನ ಜತೆಗೆ ವರ್ಷಕ್ಕೆ ಹೆಚ್ಚುವರಿಯಾಗಿ 71 ಕೋಟಿ ರೂ.ಗಳನ್ನು ಒದಗಿಸಲು ಮಂಡಳಿಯು ಅನುಮೋದನೆ ನೀಡಿದೆ.

ಶ್ರೀ ವೆಂಕಟೇಶ್ವರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (SVIMS) ಪ್ರಸ್ತುತ ಖಾಲಿ ಇರುವ ಹುದ್ದೆಗಳಿಗೆ ವೈದ್ಯರು, ದಾದಿಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಮತ್ತು ನಿರ್ಮಾಣ ಹಂತದಲ್ಲಿರುವ ಕಟ್ಟಡಗಳನ್ನು ಪೂರ್ಣಗೊಳಿಸಲು ಕೂಡ ನಿರ್ಧರಿಸಲಾಗಿದೆ.

ಶ್ರೀವಾರಿ ಸೇವಾ ಸ್ವಯಂಸೇವೆಯ ಮಾದರಿಯಲ್ಲೇ ಶ್ರೀವಾರಿ ವೈದ್ಯ ಸೇವೆಯನ್ನು ಪರಿಚಯಿಸಲು ಟಿಟಿಡಿ ಮಂಡಳಿ ನಿರ್ಧರಿಸಿದ್ದು, ಇದಕ್ಕಾಗಿ ವೈದ್ಯಕೀಯ ಕ್ಷೇತ್ರದ ತಜ್ಞರನ್ನು ಆಹ್ವಾನಿಸಲಾಗಿದೆ ಎಂದು ಮಂಡಳಿ ಸಭೆಯಲ್ಲಿ ತಿಳಿಸಿದೆ.

ಇತ್ತೀಚೆಗೆ ಮೈಸೂರು ಅರಮನೆ ಸುತ್ತಲಿನ ಪ್ರದೇಶದಲ್ಲೂ ಡ್ರೋನ್ ಹಾರಾಟವನ್ನು ನಿಷೇಧಿಸಿ ಅರಮನೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

major landslide near Kumta ಕುಮಟಾ ಬಳಿ‌ ಮತ್ತೆ ಭಾರೀ ಗುಡ್ಡ ಕುಸಿತ, ರಸ್ತೆ ಸಂಚಾರ ಬಂದ್

RGV’s nasty comment Kiara Advani’s bikini ಕಿಯಾರಾ ಅಡ್ವಾಣಿ ಬಿಕಿನಿ ಚಿತ್ರಕ್ಕೆ ರಾಮ್ ಗೋಪಾಲ್ ವರ್ಮಾ ಕಮೆಂಟ್, ಕೆರಳಿದ ನೆಟ್ಟಿಗರು

Viral ಹಾವನ್ನು ಮುದ್ದಾಡಿದ ಯುವಕ! ಮೈ ಝುಮ್ಮೆನ್ನುವ ವಿಡಿಯೋ ನೋಡಿ

TAGGED:No drone flying allowed in TirupatiTTD decides to use anti-drone technology
Share This Article
Facebook Twitter Copy Link Print
Previous Article RGV’s nasty comment Kiara Advani’s bikini ಕಿಯಾರಾ ಅಡ್ವಾಣಿ ಬಿಕಿನಿ ಚಿತ್ರಕ್ಕೆ ರಾಮ್ ಗೋಪಾಲ್ ವರ್ಮಾ ಕಮೆಂಟ್, ಕೆರಳಿದ ನೆಟ್ಟಿಗರು
Next Article UPI Payment : ಇನ್ಮುಂದೆ ತಪ್ಪಾದ ಖಾತೆಗೆ ಹಣ ಪಾವತಿಯಾಗಲ್ಲ

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?