newsics.com
ಇಂದಿನಿಂದ ರಾಜ್ಯದ ಹಲವೆಡೆ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ. ಇಂದಿನಿಂದ ಅಂದರೆ ಮೇ 22.ರಿಂದ 27ರ ತನಕ ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಮೇತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಉತ್ತರ ಕನ್ನಡ,ದಕ್ಷಿಣ ಕನ್ನಡ,ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ವಿಜಯಪುರ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಮಳೆಯಾಗೋ ಸಾಧ್ಯತೆ ಇದೆ. ಹೀಗಾಗಿ ಈ ಮೇಲಿನ ಜಿಲ್ಲೆಗಳಿಗೆ ಇಂದಿನಿಂದ ಮೆ.26ರವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ.