newsics.com
ಬೆಂಗಳೂರು: ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಿಣ ಜಿಲ್ಲೆ ಅಂತಾ ನಾಮಕರಣ ಮಾಡಲು ತೀರ್ಮಾನ ಮಾಡಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಸಚಿವ ಸಂಪುಟ ಸಭೆ ಬಳಿಕ ಮಾತನಾಡಿರುವ ಡಿ.ಕೆ.ಶಿವಕುಮಾರ್, ಇವತ್ತಿನ ಸಭೆಯಲ್ಲಿ ರಾಮನಗರ ಜಿಲ್ಲೆಯ ಹೆಸರು ಬದಲಾಯಿಸುವ ಬಗ್ಗೆ ನಿರ್ಧಾರ ಮಾಡಲಾಗಿದೆ. ಅಧಿಕೃತವಾಗಿ ಈ ಸಂಬಂಧ ಆದೇಶ ಹೊರ ಬೀಳಲಿದೆ. ಇನ್ಮುಂದೆ ರಾಮನಗರ ಹೆಡ್ ಕ್ವಾಟ್ರಸ್ ಆಗಿರಲಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರವು ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ’ ಎಂದು ನಾಮಕರಣ ಮಾಡುವ ನಿರ್ಧಾರವನ್ನು ಜುಲೈ, 2024ರಲ್ಲೂ ತೆಗೆದುಕೊಂಡಿತ್ತು. ಈ ನಾಮಕರಣವು ‘ಬ್ರ್ಯಾಂಡ್ ಬೆಂಗಳೂರು’ ಹೆಸರಿನ ಮೂಲಕ ಜಿಲ್ಲೆಗೆ ಅಭಿವೃದ್ಧಿ ಮತ್ತು ಹೂಡಿಕೆ ಆಕರ್ಷಿಸಲು ಉದ್ದೇಶಿತವಾಗಿದೆ.