newsics.com
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮತ್ತೊಂದು ಪ್ರಕರಣದಲ್ಲಿ ಕಾನೂನು ಸಂಕಷ್ಟ ಎದುರಾಗಿದೆ.
ತಿ. ನರಸೀಪುರ ಫಾರಂ ಹೌಸ್ ನಲ್ಲಿ ಬಾತುಕೋಳಿ ಇಟ್ಟಿದ್ದ ಕೇಸ್ ಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿತ್ತು.
ನಟ ದರ್ಶನ್ ಅವರು ತಮ್ಮ ಫಾರ್ಮ್ ಹೌಸ್ ನಲ್ಲಿ ವಿದೇಶಿ ತಳಿ ಬಾರ್ ಹೆಡೆಡ್ ಗೂಸ್ ಎಂಬ ಬಾತುಕೋಳಿ ಸಾಕಿದ್ದರು. ಈ ಹಿನ್ನೆಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಬಾತುಕೋಳಿಯನ್ನು ತಮ್ಮ ವಶಕ್ಕೆ ಪಡೆದಿದ್ದರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ನೋಟಿಸ್ ನೀಡಿದೆ.
ಟಿ ನರಸೀಪುರ ಕೋರ್ಟ್ ಜುಲೈ 4 ರಂದು ಕೋರ್ಟ್ ಗೆ ಹಾಜರಾಗುವಂತೆ ನಟ ದರ್ಶನ್ ಗೆ ಸಮನ್ಸ್ ಜಾರಿ ಮಾಡಿದೆ. ದರ್ಶನ್, ವಿಜಯಲಕ್ಷ್ಮೀ ಮತ್ತು ದರ್ಶನ್ ಮ್ಯಾನೇಜರ್ ಗೆ ನೋಟಿಸ್ ಜಾರಿ ಮಾಡಿದೆ.
Corona case ಕೊರೊನಾ ಹಿನ್ನೆಲೆ : ವೃದ್ದರು, ಗರ್ಭಿಣಿಯರು ಮನೆಯೊಳಗೆ ಇರುವಂತೆ ಸರ್ಕಾರದಿಂದ ಮಾರ್ಗಸೂಚಿ