Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Driverless car ಬೆಂಗಳೂರಲ್ಲಿ ಚಾಲಕರಹಿತ ಕಾರು ಸಂಚಾರ: ಇದು ದೇಶದಲ್ಲೇ ಮೊದಲು, ವಿಡಿಯೋ ನೋಡಿ
ಕರ್ನಾಟಕದೇಶಪ್ರಮುಖ

Driverless car ಬೆಂಗಳೂರಲ್ಲಿ ಚಾಲಕರಹಿತ ಕಾರು ಸಂಚಾರ: ಇದು ದೇಶದಲ್ಲೇ ಮೊದಲು, ವಿಡಿಯೋ ನೋಡಿ

Share
2 Min Read
SHARE

newsics.com

ಬೆಂಗಳೂರು: ರಾಜಧಾನಿಯ ಮೈನಸ್ ಝೀರೋ ಸ್ಟಾರ್ಟಪ್ ಕಂಪನಿ ಅಭಿವೃಧ್ಧಿಪಡಿಸಿರುವ ದೇಶದ ಮೊದಲ ಕೃತಕ ಬುದ್ಧಿ ಮತ್ತೆ ಆಧರಿತ ಸ್ವಯಂಚಾಲಿತ ಕಾರು ಬೆಂಗಳೂರಲ್ಲಿ ಪ್ರಾಯೋಗಿಕ ಸಂಚಾರ ಆರಂಭಿಸಿದೆ.

ದೇಶದ ಸಂಚಾರಿ ವ್ಯವಸ್ಥೆಗೆ ಅನುಗುಣವಾಗಿ ಈ ಕಾರು ಓಡುವುದು ವಿಶೇಷ. ಇಷ್ಟು ದಿನ ಕೇವಲ ಎಲಾನ್ ಮಸ್ಕರ ಟೆಸ್ಲಾ ಡ್ರೈವರ್ಸ್ ಕಾರಿನ ವಿಡಿಯೋ ನೋಡುವುದೇ ಆಗಿತ್ತು. ಆದರೆ, ಈಗ ನಮ್ಮ ರಾಜ್ಯದಲ್ಲಿ ಇಂಥದ್ದೊಂದು ಆಟೋಪೈಲೆಟ್ ಕಾರು ಸಿದ್ಧವಾಗಿದ್ದು, ಬೆಂಗಳೂರಿನ ರಸ್ತೆಯಲ್ಲಿ ಪ್ರಾಯೋಗಿಕ ಸಂಚಾರ ನಡೆಸಿರುವುದಾಗಿ ಕಂಪನಿ ತನ್ನ ‘ಎಕ್ಸ್’ ಖಾತೆಯಲ್ಲಿ ತಿಳಿಸಿದೆ.

ಇದು ಭಾರತದಲ್ಲೇ ಪ್ರಥಮ ಬಾರಿ ಎಂದು ಕಂಪನಿ ಹೇಳಿಕೊಂಡಿದೆ. ಈ ಕಾರು ಒನ್‌ವೇಯಲ್ಲಿ ಎದುರಾಗುವ ವಾಹನ ಗಳನ್ನು ಸಲೀಸಾಗಿ ಗುರುತಿಸುತ್ತದೆ. ಎದುರಿನವರು ಏಕಾಏಕಿ ಬ್ರೇಕ್ ಹಾಕಿದಾಗ ಅದನ್ನು ರಿಯಲ್ ಟೈಮ್‌ನಲ್ಲಿ ಗಮನಿಸಿ ತಾನೂ ನಿಂತು ಸಾಗುತ್ತದೆ. ಅಕ್ಕಪಕ್ಕ, ಹಿಂದೆ ಮುಂದೆ ಬರುವ ಕಾರಿರಲಿ, ಬೈಕಿರಲಿ, ಪಾದಚಾರಿಗಳಿರಲಿ ಎಲ್ಲವನ್ನೂ ತಕ್ಷಣ ಗುರುತಿಸಿಕೊಂಡು ಅದಕ್ಕೆ ಅನುಗುಣವಾಗಿ ಚಾಲನೆ ಆಗುವ ಸಾಮರ್ಥ್ಯ ಹೊಂದಿದೆ ಎಂದು ತನ್ನ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಕಂಪನಿ ಮಾಹಿತಿ ನೀಡಿದೆ.
ದುಬಾರಿ ಅಲ್ಲೊರಿದಂ, ಸೆನ್ಸಾರ್‌ಗಳನ್ನು ಬಳಸಿಕೊಳ್ಳದೆ ಈಗಿರುವ ಸಾಂಪ್ರದಾಯಿಕ ಎಐ ವ್ಯವಸ್ಥೆಗಳಿಗಿಂತ ಭಿನ್ನವಾಗಿ, ಎಐ ಮಾದರಿಯನ್ನು ಅಭಿವೃದ್ಧಿಪಡಿಸಿದೆ. ಜತೆಗೆ ಲಭ್ಯವಿರುವ ಡೇಟಾ ಅಥವಾ ಹೈ-ಡೆಫಿನೆಷನ್ ನಕ್ಷೆಗಳಿಲ್ಲದೆ ಸ್ವಯಂ-ಮೇಲ್ವಿಚಾರಣೆ ರೀತಿಯಲ್ಲಿ ತಂತ್ರಜ್ಞಾನ ಅಭಿವೃದ್ಧಿಪಡಿಸಿ ಅಳವಡಿಸಿದೆ. ಈ ಹಿಂದೆ ಮೈನಸ್ ಝೀರೊ ಕಂಪನಿ ಕ್ಯಾಂಪಸ್ ಒಳಗಡೆ ಆಟೋಪೈಲಟ್ ಕಾರಿನ ಪ್ರಾಯೋಗಿಕ ಸಂಚಾರ ನಡೆಸಿತ್ತು. ಭಾರತದಲ್ಲಿ ಸದ್ಯ ಎಡಿಎಸ್ (ಅಡ್ವಾನ್‌ಸ್‌ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ) ಎಲ್1, ಎಲ್2 ಹಂತದಲ್ಲಿದೆ. ಎಲ್2+, ಎಲ್2++ ಮತ್ತು ಎಲ್3 ತಂತ್ರಜ್ಞಾನದತ್ತ ಮುಂದುವರಿಯುವ ಗುರಿಯೊಂದಿಗೆ ಸಾಗುತ್ತಿದ್ದೇವೆ ಎಂದು ಮೈನಸ್ ಝೀರೊ ತಿಳಿಸಿದೆ.
ಜಾಗತಿಕವಾಗಿ ಟೆಸ್ಲಾದ ಪೂರ್ಣಪ್ರಮಾಣದ ಸ್ವಯಂಚಾಲಿತ ಕಾರು, ಮರ್ಸಿಡಿಸ್ ಡ್ರೈವ್ ಪೈಲಟ್, ಜಿಎಂ ಸೂಪರ್ ಕ್ರೂಸ್‌ಗಳು ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ರಸ್ತೆಗಿಳಿದಿವೆ. ಈ ಕಾರುಗಳು ಅಪಘಾತಗಳನ್ನೂ ಸ್ವಯಂಚಾಲಿತವಾಗಿ ತಡೆಯಬಲ್ಲವು. ಮೈನಸ್ ಝೀರೋ ಅಭಿವೃದ್ಧಿಪಡಿಸಿದ ಈ ಕಾರು ಸದ್ಯ ಸುರಕ್ಷತಾ ವಿಚಾರವಾಗಿ ಇನ್ನಷ್ಟು ಪ್ರಾಯೋಗಿಕ ಪರೀಕ್ಷೆಗೆ ಒಳಪಡಲಿದೆ ಎಂದು ಕಂಪನಿ ತಿಳಿಸಿದೆ.

https://twitter.com/i/status/1924708969681191353

Face scanning technology ರಕ್ತವನ್ನೇ ಪಡೆಯದೆ ಒಂದೇ ನಿಮಿಷದೊಳಗೆ ಪರೀಕ್ಷೆ ವರದಿ! ಇದು AI ಚಮತ್ಕಾರ

TAGGED:Driverless car traffic in Bengaluru: This is the first in the country
Share This Article
Facebook Twitter Copy Link Print
Previous Article Sugar baby ವಿವಾದಕ್ಕೀಡಾಗತ್ತಾ ಥಗ್‌ಲೈಫ್‌ನ ಶುಗರ್ ಬೇಬಿ? ತ್ರಿಷಾ ಸೊಂಟ ಬಳುಕಿಸಿದ್ದು ನೋಡಿ…
Next Article Rain info ನಾಳೆ, ನಾಡಿದ್ದು ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?