Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Harvard University ಹಾರ್ವರ್ಡ್ ವಿವಿಗೆ ವಿದೇಶಿ ವಿದ್ಯಾರ್ಥಿಗಳ ಸೇರ್ಪಡೆಗೆ ಟ್ರಂಪ್ ತಡೆ: ಕೋರ್ಟ್ ಮೊರೆಹೋದ ವಿವಿ
ದೇಶಪ್ರಮುಖವಿದೇಶ

Harvard University ಹಾರ್ವರ್ಡ್ ವಿವಿಗೆ ವಿದೇಶಿ ವಿದ್ಯಾರ್ಥಿಗಳ ಸೇರ್ಪಡೆಗೆ ಟ್ರಂಪ್ ತಡೆ: ಕೋರ್ಟ್ ಮೊರೆಹೋದ ವಿವಿ

Share
2 Min Read
SHARE

newsics.com

ನ್ಯೂಯಾರ್ಕ್‌: ಹಾರ್ವರ್ಡ್‌ ವಿಶ್ವವಿದ್ಯಾಲಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಡಳಿತದ ನಡುವಿನ ಜಟಾಪಟಿ ತೀವ್ರಗೊಂಡಿದೆ.

ಹಾರ್ವರ್ಡ್‌ ವಿಶ್ವವಿದ್ಯಾಲಯದಲ್ಲಿ ವಿದೇಶಿ ವಿದ್ಯಾರ್ಥಿಗಳ ಸೇರ್ಪಡೆಗೆ ಟ್ರಂಪ್‌ ಆಡಳಿತ ತಡೆ ನೀಡಿದೆ. ಜತೆಗೆ, ಇಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅಸ್ತಿತ್ವದಲ್ಲಿರುವ ಬೇರೆ ಕಾಲೇಜುಗಳು ಅಥವಾ ಶಾಲೆಗಳಿಗೆ ವರ್ಗಾವಣೆ ಆಗಬಹುದಾಗಿದೆ. ಇಲ್ಲವಾದ್ದಲ್ಲಿ ಕಾನೂನಿನ ಮಾನ್ಯತೆ ಕಳೆದುಕೊಳ್ಳಬೇಕಾಗುತ್ತದೆ ಎಂದು ಹೋಮ್‌ಲ್ಯಾಂಡ್ ಭದ್ರತಾ ಇಲಾಖೆ ಎಚ್ಚರಿಸಿದೆ.

ಈ ನಿರ್ಧಾರ ಖಂಡಿಸಿ ಹಾರ್ವರ್ಡ್ ವಿವಿ‌ ಕೋರ್ಟ್ ಮೆಟ್ಟಿಲೇರಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತವು, ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಗೃಹ ಭದ್ರತಾ ಇಲಾಖೆಯ ತನಿಖೆ ನಡೆಯುತ್ತಿರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದ್ದು, ಇದರಿಂದ ವಿದೇಶಿ ವಿದ್ಯಾರ್ಥಿಗಳ ಹಾರ್ವರ್ಡ್‌ ವಿಶ್ವವಿದ್ಯಾಲಯದಲ್ಲಿ ಓದುವ ಕನಸು ಭಗ್ನಗೊಂಡಿದೆ.

ಅಂತರರಾಷ್ಟ್ರೀಯ ವಿದ್ಯಾರ್ಥಿ ವೀಸಾ ಹೊಂದಿರುವವರು ನಡೆಸುತ್ತಿರುವ ಕಾನೂನುಬಾಹಿರ ಮತ್ತು ಹಿಂಸಾತ್ಮಕ ಚಟುವಟಿಕೆಗಳ ಕುರಿತ ಮಾಹಿತಿಯನ್ನು ಏಪ್ರಿಲ್ 30ರ ಒಳಗಾಗಿ ಸಲ್ಲಿಸುವಂತೆ ಅಮೆರಿಕ ಗೃಹ ಇಲಾಖೆಯು ಈಚೆಗೆ ಹಾರ್ವರ್ಡ್‌ ವಿಶ್ವವಿದ್ಯಾಲಯಕ್ಕೆ ಸೂಚಿಸಿತ್ತು.

ಒಂದು ವೇಳೆ, ಈ ಗಡುವಿನ ಒಳಗಾಗಿ ಮಾಹಿತಿ ಸಲ್ಲಿಸದಿದ್ದಲ್ಲಿ, ವಿದೇಶಿ ವಿದ್ಯಾರ್ಥಿಗಳ ನೋಂದಣಿಗೆ ಸಂಬಂಧಿಸಿ ವಿವಿ ಹೊಂದಿರುವ ಸೌಲಭ್ಯವನ್ನು ಹಿಂಪಡೆಯಲಾಗುವುದು ಎಂದು ಇಲಾಖೆ ತಿಳಿಸಿತ್ತು. ಇದರ ಬೆನ್ನಲ್ಲೇ ವಿಶ್ವವಿದ್ಯಾಲಯಕ್ಕೆ 2.7 ಮಿಲಿಯನ್ ಡಾಲರ್‌ಗೂ (ಅಂದಾಜು ₹23 ಕೋಟಿ) ಅಧಿಕ ಅನುದಾನ ನೀಡುವುದನ್ನು ಸರ್ಕಾರ ರದ್ದು ಮಾಡಿತ್ತು.

ಸರ್ಕಾರ ನೀಡಿದ್ದ ಕೆಲ ಸೂಚನೆಗಳನ್ನು ವಿಶ್ವವಿದ್ಯಾಲಯ ಇತ್ತೀಚೆಗೆ ತಿರಸ್ಕರಿಸಿತ್ತು. ಈ ಕಾರಣಕ್ಕೆ ಟ್ರಂಪ್‌ ಆಡಳಿತ ಈ ಕ್ರಮ ಕೈಗೊಂಡಿದೆ.

ಹಾರ್ವರ್ಡ್‌ ವಿಶ್ವವಿದ್ಯಾಲಯ ಎಡಪಂಥೀಯ ಸಿದ್ಧಾಂತ ಬೆಂಬಲಿಸುತ್ತದೆ ಎಂಬ ಕಾರಣಕ್ಕೆ ವಿವಿಗೆ ನೀಡಿರುವ ತೆರಿಗೆ ವಿನಾಯಿತಿ ಸೌಲಭ್ಯವನ್ನು ಕೂಡ ಹಿಂಪಡೆಯುವುದಾಗಿ ಸರ್ಕಾರ ಎಚ್ಚರಿಸಿತ್ತು.

ಹಾರ್ವರ್ಡ್ ವಿಶ್ವವಿದ್ಯಾಲಯವು ಈ ಕ್ರಮವನ್ನು ಖಂಡಿಸಿದ್ದು, “ಈ ಪ್ರತೀಕಾರದ ಕ್ರಮದಿಂದಾಗಿ ವಿಶ್ವವಿದ್ಯಾಲಯಕ್ಕೆ ಗಂಭೀರ ಹಾನಿಯಾಗಲಿದೆ. ಸರ್ಕಾರದ ಕ್ರಮ ಕಾನೂನುಬಾಹಿರವಾಗಿದ್ದು, 140ಕ್ಕೂ ಹೆಚ್ಚು ದೇಶಗಳಿಂದ ಬಂದಿರುವ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ” ಎಂದು ತೀವ್ರವಾಗಿ ಅಸಮಾಧಾನ ವ್ಯಕ್ತಪಡಿಸಿದೆ.

ವಿಶ್ವವಿದ್ಯಾಲಯವನ್ನು ಮತ್ತು ಈ ರಾಷ್ಟ್ರದ ಪ್ರತಿಷ್ಠೆಯನ್ನು ಹೆಚ್ಚಿಸುವ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಮತ್ತು ವಿದ್ವಾಂಸರನ್ನು ಹೊಂದಲು ಹಾರ್ವರ್ಡ್‌ನ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು ನಾವು ಬದ್ಧರಾಗಿದ್ದೇವೆ” ಎಂದು ವಿಶ್ವವಿದ್ಯಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

New name for Mysore Pak ಮೈಸೂರ್ ಪಾಕ್‌ಗೆ ಹೊಸ ಹೆಸರು! ಮರುನಾಮಕರಣಕ್ಕೆ ಕಾರಣವೇನು?

IT office relocation to Pune ಭಾಷಾ ಅಸಹನೆ: ಪುಣೆಗೆ ಕಚೇರಿ ಸ್ಥಳಾಂತರ ಘೋಷಣೆ ಮಾಡಿದ ಕನ್ನಡ ಮಾತನಾಡಲು ಬಯಸದ ಐಟಿ ಉದ್ಯಮಿ

Girl strips naked and beats up boyfriend ಪ್ರೀತಿಸಿ ವಂಚಿಸಿದ ಪ್ರಿಯಕರನ ಬಟ್ಟೆ ಬಿಚ್ಚಿ ನಡುರಸ್ತೆಯಲ್ಲೇ ಹೊಡೆದ ಹುಡುಗಿ! ವೈರಲ್ ವಿಡಿಯೋ ನೋಡಿ

TAGGED:Harvard University moves court over Trump's ban on foreign students
Share This Article
Facebook Twitter Copy Link Print
Previous Article New name for Mysore Pak ಮೈಸೂರ್ ಪಾಕ್‌ಗೆ ಹೊಸ ಹೆಸರು! ಮರುನಾಮಕರಣಕ್ಕೆ ಕಾರಣವೇನು?
Next Article ನಾನು ಚಿಪ್ಸ್ ಕದ್ದಿಲ್ಲಮ್ಮ, ಆದ್ರೂ ಅವಮಾನ ಮಾಡಿದ್ರು… ಮುಗ್ಧ ಬಾಲಕನ ಜೀವ ಹೋಯ್ತು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?