newsics.com
ಹಾಸನ: ಬೇಲೂರು ತಾಲ್ಲೂಕಿನ ಅಂಕಿಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿಯಾಗಿದ್ದಾರೆ.
ಗಜೇಂದ್ರಪುರ ಗ್ರಾಮದ ಚಂದ್ರಮ್ಮ (45) ಮೃತ ಮಹಿಳೆ. ಡಾ. ಕರುಣ್ ಎಂಬುವರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ ಕಾಡಾನೆಯೊಂದು ಚಂದ್ರಮ್ಮ ಅವರನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿ, ಕಾಲಿನಿಂದ ತುಳಿದು ಬರ್ಬರವಾಗಿ ಕೊಂದಿದೆ.
ಘಟನೆಯಿಂದ ತೀವ್ರ ಆಘಾತಕ್ಕೊಳಗಾದ ಸ್ಥಳೀಯರು ಮತ್ತು ಕೆಲಸಗಾರರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಅರೇಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.
ಘಟನೆಯಿಂದ ಸ್ಥಳೀಯರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದ್ದು, ಕಾಡಾನೆ-ಮಾನವ ಸಂಘರ್ಷ ಪರಿಹಾರಕ್ಕೆ ಆಗ್ರಹಿಸಿದ್ದಾರೆ.
Marriage matter ಮುಹೂರ್ತದ ವೇಳೆ ಬಂತು ಫೋನ್ ಕಾಲ್: ಮದುವೆ ಬೇಡವೆಂದ ವಧು, ಮುಂದೇನಾಯ್ತು?
Covid-19: ಕರ್ನಾಟಕದಲ್ಲಿ ಮತ್ತೆ ಮಹಾಮಾರಿ ಕೊರೊನಾ; ಮೇ ತಿಂಗಳಿನಲ್ಲಿ ಒಟ್ಟು 33 ಕೇಸ್ ದಾಖಲು
Madenuru Manu ಅತ್ಯಾಚಾರ ಕೇಸ್: ಮಡೆನೂರು ಮನು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದೇನು?