newsics.com
ಕಾಮಿಡಿ ಕಿಲಾಡಿಗಳು ಸೀಸನ್ 2ರ ವಿನ್ನರ್, ಹಾಸ್ಯ ನಟ ಮಡೆನೂರು ಮನು ಮೇಲೆ ಅತ್ಯಾಚಾರದ ಆರೋಪ ಕೇಳಿ ಬಂದಿದೆ. ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ಮೂಲಕ ನಟ ಮಡೆನೂರು ಮನು ಜನಪ್ರಿಯತೆ ಪಡೆದುಕೊಂಡಿದ್ದರು. ಅಲ್ಲದೇ ಕುಲದಲ್ಲಿ ಕೀಳ್ಯಾವುದೋ ಸಿನಿಮಾದಲ್ಲೂ ನಟಿಸಿದ್ದರು ನಟ ಮಡೆನೂರು ಮನು.
ಇದೀಗ ಮನು ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ.ಮನು ಕನ್ನಡದ ಪ್ರಮುಖ ನಟರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಾರೆ. ಪ್ರಸ್ತುತ ಈ ಆಡಿಯೋ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳು ಗರಂ ಆಗಿದ್ದಾರೆ.
ಆಡಿಯೋದಲ್ಲಿ ಶಿವರಾಜ್‌ಕುಮಾರ್ ಇನ್ನೊಂದು ಆರು ವರ್ಷ ಬದುಕಿದ್ರೆ ಹೆಚ್ಚು, ಸತ್ತು ಹೋಗ್ತಾರೆ ನನಗೆ ಗೊತ್ತು. ಧ್ರುವ ಸರ್ಜಾ ಇನ್ನೊಂದು ಎಂಟು ವರ್ಷ ಮಾರ್ಕೆಟ್‌ನಲ್ಲಿರಬಹುದು. ನಟ ದರ್ಶನ್ ಈಗಾಗಲೇ ಸತ್ತೇ ಹೋದ. ದರ್ಶನ್ ಸರ್‌ಗೆ ಇನ್ನೊಂದು ಆರು ವರ್ಷ ಕ್ರೇಜ್ ಇರುತ್ತೆ, ಆದ್ರೆ ಸಿನಿಮಾ ಮಾಡಲ್ಲ. ಈ ಮೂವರ ವಿರುದ್ಧ ಕಾಂಪಿಟೇಶನ್ ಕೊಡೋಕೆ ಬಂದಿರೋ ಗಂಡುಗಲಿ ನಾನುʼ ಎಂದು ಆಡಿಯೋದಲ್ಲಿದೆ. ಈ ಧ್ವನಿ ಮಡೆನೂರು ಮನು ಅವರದ್ದೇ ಎಂದು ಹೇಳಲಾಗುತ್ತಿದೆ. ಆದರೆ ಸ್ಪಷ್ಟತೆ ಇಲ್ಲ.ಆಡಿಯೋ ಎಲ್ಲೆಡೆ ಸದ್ದು ಮಾಡುತ್ತಿದೆ. ಶಿವಣ್ಣ, ಧ್ರುವ ಸರ್ಜಾ ಹಾಗೂ ದರ್ಶನ್ ಅಭಿಮಾನಿಗಳು ಮಡೆನೂರು ಮನು ವಿರುದ್ಧ ಕಿಡಿಕಾರುತ್ತಿದ್ದಾರೆ.
ಮಡೆನೂರು ಮನು ಅವರು ಗೆಳೆಯರೊಂದಿಗೆ ಮದ್ಯ ಸೇವಿಸಿದಾಗ ಈ ರೀತಿ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವೇಳೆ ಅಲ್ಲಿದ್ದವರು ಯಾರೋ ಇದನ್ನು ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡು ಇದೀಗ ವೈರಲ್ ಮಾಡಿರಬಹುದು ಎಂದು ಸಂಶಯ ವ್ಯಕ್ತವಾಗುತ್ತಿದೆ.