newsics.com
ಬೆಂಗಳೂರು: ವ್ಯಕ್ತಿಯೊಬ್ಬ ಮದ್ಯಪಾನ ಮಾಡಿ ಪೊಲೀಸರ ಮೇಲೆಯೇ ಕಾರು ಹತ್ತಿಸಲು ಯತ್ನಿಸಿರುವ ಘಟನೆ ಬೆಂಗಳೂರಿನ ಕೋರಮಂಗಲದ ಜ್ಯೋತಿ ನಿವಾಸ ಕಾಲೇಜು ಬಳಿ ಶನಿವಾರ ತಡರಾತ್ರಿ ಘಟನೆ ಸಂಭವಿಸಿದೆ.
ಆರೋಪಿ ನಂದಕೃಷ್ಣ ಎಂಬಾತ ಪೊಲೀಸ್ ಬ್ಯಾರುಕೇಡ್ಗೆ ಕಾರು ಗುದ್ದಿಸಿದ್ದಾನೆ. ಇದರಿಂದಾಗಿ ಪೊಲೀಸರೊಬ್ಬರ ಕಾಲಿಗೆ ಗಾಯವಾಗಿದೆ. ನಂತರ ಕಾರಿನ ಬಾಗಿಲು ತೆರೆಯುವಂತೆ ಪೊಲೀಸರು ಸೂಚನೆ ನೀಡಿದರೂ ನಂದಕೃಷ್ಣ ಪ್ರತಿಕ್ರಿಯಿಸುತ್ತಲೇ ಇರಲಿಲ್ಲ. ಹೀಗಾಗಿ ಪೊಲೀಸರೇ ಕಾರಿನ ಗಾಜು ಒಡೆದು ಆತನನ್ನು ಹೊರಗೆ ಎಳೆದು ತೆಗೆದಿದ್ದಾರೆ. ಇದೇ ವೇಳೆ ಆತ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಎನ್ನಲಾಗಿದೆ.
ಸದ್ಯ, ಘಟನೆ ಸಂಬಂಧ ಆಡುಗೋಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಡ್ರಂಕ್ ಆಯಂಡ್ ಡ್ರೈವ್ ಪ್ರಕರಣ ಸಾಮಾಜಿಕ ಮಾಧ್ಯಮಗಳಲ್ಲಿಯೂ ಈಗ ಭಾರಿ ಸದ್ದು ಮಾಡುತ್ತಿದೆ. ಪೊಲೀಸರು ಕಾರಿನ ಗಾಜು ಒಡೆದು ನಂದಕೃಷ್ಣನನ್ನು ಹೊರತೆಗೆಯುತ್ತಿರುವ ವಿಡಿಯೋವನ್ನು ‘ಕರ್ನಾಟಕ ಪೋರ್ಟ್ಫೊಲಿಯೋ’ ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಲಾಗಿದೆ.
Gold Rate Today Bangalore: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಗ್ರಾಮ್ಗೆ 40 ರೂ ಇಳಿಕೆ