newsics.com
ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಈ ಘಟನೆ ಹನೋಯ್ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎನ್ನಲಾಗಿದೆ.
ವಿಡಿಯೊದಲ್ಲಿ ಮ್ಯಾಕ್ರನ್ ಅವರಿಗೆ ಅವರ ಪತ್ನಿ ಕಪಾಳಮೋಕ್ಷ ಮಾಡುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ದಂಪತಿ ನಡುವೆ ಏನೋ ವೈಮಸ್ಸು ಇರುವುದು ಈ ವಿಡಿಯೊದಲ್ಲಿ ಸ್ಪಷ್ಟವಾಗಿದ್ದು, ವಿಡಿಯೊ ವೈರಲ್
ಆಗಿರುವುದು ಮ್ಯಾಕ್ರನ್ ಅವರನ್ನು ಮುಜುಗರಕ್ಕೀಡು ಮಾಡಿದೆ.
ಇನ್ನು ವಿಡಿಯೊ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಅನೇಕ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ. ದಂಪತಿಯ ನಡುವಿನ ವೈಮನಸ್ಸು ಬಟಾಬಯಲಾಗಿದೆ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.