Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Supreme court ಬೆಟ್ಟಿಂಗ್ ಇಲ್ಲದೆ ಬರೀ ಮನರಂಜನೆಗಾಗಿ ಇಸ್ಪೀಟ್ ಆಡುವುದು ತಪ್ಪಲ್ಲ: ಸುಪ್ರೀಂ
ದೇಶಪ್ರಮುಖ

Supreme court ಬೆಟ್ಟಿಂಗ್ ಇಲ್ಲದೆ ಬರೀ ಮನರಂಜನೆಗಾಗಿ ಇಸ್ಪೀಟ್ ಆಡುವುದು ತಪ್ಪಲ್ಲ: ಸುಪ್ರೀಂ

Share
1 Min Read
SHARE

newsics.com

ನವದೆಹಲಿ: ಬೆಟ್ಟಿಂಗ್ ಹಾಗೂ ಜೂಜಿನ ಉದ್ದೇಶವಿಲ್ಲದೆ ಮನರಂಜನೆ ಮತ್ತು ವಿನೋದಕ್ಕಾಗಿ ಇಸ್ಪೀಟು ಆಡುವುದು ನೈತಿಕ ಅಧಃಪತನ ಅಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ.

ಕರ್ನಾಟಕದ ‘ಸರ್ಕಾರಿ ಪಾಸಲನ್ ಕಾರ್ಖಾನೆ ನೌಕರರ ಗೃಹನಿರ್ಮಾಣ ಸಹಕಾರ ಸಂಘ’ದ ಆಡಳಿತ ಮಂಡಳಿಗೆ ಚುನಾಯಿತರಾಗಿದ್ದ ಹನುಮಂತರಾಯಪ್ಪ ವೈ.ಸಿ. ಎಂಬುವರ ಆಯ್ಕೆಯನ್ನು ಕೋರ್ಟ್‌ ಮರುಸ್ಥಾಪಿಸಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ ಸಿಂಗ್ ಅವರ ವಿಭಾಗೀಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ರಸ್ತೆಯ ಬದಿಯಲ್ಲಿ ಕೆಲವರ ಜೊತೆಯಾಗಿ ಇಸ್ಪೀಟು ಆಡುತ್ತಿದ್ದ ಹನುಮಂತರಾಯಪ್ಪ ಅವರಿಗೆ ಯಾವುದೇ ವಿಚಾರಣೆ ನಡೆಸದೆ ₹200 ದಂಡ ವಿಧಿಸಲಾಗಿತ್ತು.

ಹನುಮಂತರಾಯಪ್ಪ ಅವರು ಜೂಜಾಡುವ ಅಭ್ಯಾಸ ಬೆಳೆಸಿಕೊಂಡ ವ್ಯಕ್ತಿ ಅಲ್ಲ ಎಂದು ಪೀಠವು ಹೇಳಿದೆ. ‘ಇಸ್ಪೀಟು ಆಟದಲ್ಲಿ ಹಲವು ಬಗೆಗಳಿವೆ. ಆದರೆ, ಅಂತಹ ಪ್ರತಿ ಬಗೆಯೂ, ಅದರಲ್ಲೂ ಮುಖ್ಯವಾಗಿ ಮನರಂಜನೆಗಾಗಿ ಹಾಗೂ ವಿನೋದಕ್ಕಾಗಿ ಆಡುವುದು, ನೈತಿಕವಾದ ಅಧಃಪತನಕ್ಕೆ ಒಯ್ಯುವಂಥದ್ದು ಎಂಬುದನ್ನು ಒಪ್ಪಿಕೊಳ್ಳುವುದು ಕಷ್ಟ. ವಾಸ್ತವದಲ್ಲಿ, ನಮ್ಮ ದೇಶದ ಹಲವು ಕಡೆಗಳಲ್ಲಿ ಜೂಜು ಅಥವಾ ಬೆಟ್ಟಿಂಗ್‌ನ ಲವಲೇಶವೂ ಇಲ್ಲದೆ ಇಸ್ಪೀಟು ಆಡುವುದು ಬಡವರ ಮನರಂಜನಾ ಮಾರ್ಗ ಎಂದು ಒಪ್ಪಿತವಾಗಿದೆ’ ಎಂದು ಹೇಳಿದೆ.

ಹನುಮಂತರಾಯಪ್ಪ ಅವರು ಜೂಜಿನ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದರು ಎಂದು ಚುನಾವಣೆಯಲ್ಲಿ ಹನುಮಂತರಾಯಪ್ಪ ವಿರುದ್ಧ ಸೋತಿದ್ದ ರಂಗನಾಥ ಬಿ. ಎನ್ನುವವರು ಸಹಕಾರ ಸಂಘಗಳ ಜಂಟಿ ನಿಬಂಧಕರಲ್ಲಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

ನೈತಿಕ ಅಧಃಪತನದ ತಪ್ಪಿನಲ್ಲಿ ಹನುಮಂತರಾಯಪ್ಪ ಭಾಗಿಯಾಗಿದ್ದಾರೆ ಎಂಬ ಕಾರಣ ನೀಡಿ ಹನುಮಂತರಾಯಪ್ಪ ಅವರ ಆಯ್ಕೆಯನ್ನು ರದ್ದುಪಡಿಸಲಾಗಿತ್ತು. ಆಯ್ಕೆ ರದ್ದುಪಡಿಸಿದ ಕ್ರಮವನ್ನು ಹೈಕೋರ್ಟ್‌ ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಹನುಮಂತರಾಯಪ್ಪ ಅವರು ಸುಪ್ರೀಂ ಕೋರ್ಟ್‌ ಮೊರೆಹೋಗಿದ್ದರು.

Shocking incident ರಾಯರ ಮಠದೊಳಗೆ ಚಪ್ಪಲಿ ಎಸೆದು ಮಹಿಳೆ ಪರಾರಿ: ಭಕ್ತರಿಗೆ ಆಘಾತ, ಕ್ರಮಕ್ಕೆ ಆಗ್ರಹ

Tender work ಟೆಂಡರ್ ವರ್ಕ್ ಆರ್ಡರ್ : ರಾಜ್ಯದ ಸಚಿವರೊಬ್ಬರ ಅಳಿಯ ಸೇರಿದಂತೆ 5 ಮಂದಿ ವಿರುದ್ಧ ಕೇಸ್ ದಾಖಲು.!

Mobile ಈಗ ನಿಮ್ಮ ಫೋನ್ ಮನುಷ್ಯರಂತೆ ನಿಮ್ಮೊಂದಿಗೆ ಮಾತನಾಡುತ್ತದೆ! ಹೇಗೆ ಗೊತ್ತಾ?

TAGGED:Playing ispeet for entertainment only without betting is not wrong: Supreme Court
Share This Article
Facebook Twitter Copy Link Print
Previous Article India Rain Alert: ವಾಡಿಕೆಗಿಂತ ಮೊದಲೇ ಮುಂಗಾರು ಆಗಮನ: ಈ ರಾಜ್ಯಗಳಲ್ಲಿ ಭಾರಿ ಮಳೆ
Next Article PM MODI ಇಂದು ಗುಜರಾತ್ ಗೆ ಪ್ರಧಾನಿ ಮೋದಿ ಭೇಟಿ : ಬರೋಬ್ಬರಿ 77,400 ಕೋಟಿ ರೂ. ಯೋಜನೆಗಳಿಗೆ ಚಾಲನೆ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?