newsics.com
ಬೆಂಗಳೂರು:ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆಯಾಗುತ್ತಿದೆ. ಇಂದು 36 ಜನರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ವರದಿಯಿಂದ ತಿಳಿದು ಬಂದಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು ಆರ್ ಟಿ ಪಿಸಿಆರ್ ಮೂಲಕ 361, ರಾಟ್ ಮೂಲಕ 20 ಜನರು ಸೇರಿದಂತೆ 381 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಯಿತು. ಇವರಲ್ಲಿ 36 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 100ಕ್ಕೆ ಏರಿಕೆಯಾಗಿದೆ ಎಂಬುದಾಗಿ ಹೇಳಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೀಗಾಗಿ ಮಾಸ್ಕ್ ಧರಿಸುವಂತೆ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ. ಇದರ ನಡುವೆ ಕೋವಿಡ್ ಬಗ್ಗೆ ಯಾವುದೇ ಆತಂಕ ಪಡುವಂತ ಪರಿಸ್ಥಿತಿ ಕರ್ನಾಟಕದಲ್ಲಿ ಇಲ್ಲ ಎಂಬುದಾಗಿಯೂ ಹೇಳಿದೆ.