newsics.com
ಬೆಂಗಳೂರು: ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾದಲ್ಲಿ ಅಭಿನಯಿಸಿದ್ದ ಸಜ್ಜನಿಕೆಯ ನಟ ಎನ್. ಶ್ರೀಧರ್ ಸೋಮವಾರ ಮಧ್ಯರಾತ್ರಿ ನಿಧನರಾದರು.
ಮೊನ್ನೆ ಮೊನ್ನೆಯವರೆಗೂ ಆರೋಗ್ಯವಾಗಿಯೇ ಇದ್ದ ಕಿರುತೆರೆ ನಟ ಶ್ರೀಧರ್ ಬದುಕುಳಿಯಲು ತೀವ್ರವಾಗಿ ಹಂಬಲಿಸಿದ್ದರೂ ಅವರ ಆಸೆ ಕೊನೆಗೂ ಈಡೇರಲೇ ಇಲ್ಲ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಚಿಕಿತ್ಸೆಗೆ ಜನರಿಂದ ಸಹಾಯಧನ ನಿರೀಕ್ಷಿಸಿದ್ದರು.
ಕೊನೆಯ ದಿನಗಳಲ್ಲಿ ಅವರು ‘ವಧು’ ಸೀರಿಯಲ್‌ನಲ್ಲಿ ನಾಯಕಿ ಡಿವೋರ್ಸ್ ಲಾಯರ್ ವಧು ಚಿಕ್ಕಪ್ಪನ ಪಾತ್ರದಲ್ಲಿ ಅಭಿನಯಿಸುತ್ತಿದ್ದರು.
ಬೆಂಗಳೂರಿನ ಹೆಬ್ಬಾಳದಲ್ಲಿರುವ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ನಟ ಶ್ರೀಧರ್ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಸೋಮವಾರ ಮಧ್ಯರಾತ್ರಿ 12ರ ವೇಳೆಗೆ ಕೊನೆಯುಸಿರೆಳೆದರು.
ಮಂಗಳವಾರ ಬೆಳಗ್ಗೆ 11ಕ್ಕೆ ಆಸ್ಪತ್ರೆಯಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ನಟ ಶ್ರೀಧರ್ ಅವರ ಆಪ್ತ ಮೂಲಗಳು ತಿಳಿಸಿವೆ.
ರಂಗತಜ್ಞ ಎ.ಎಸ್.ಮೂರ್ತಿಯವರ ಅಭಿನಯ ತರಂಗದ ವಿದ್ಯಾರ್ಥಿಯಾಗಿದ್ದ ಅವರು ಬಳಿಕ ನಟನಾ ಕ್ಷೇತ್ರ ಪ್ರವೇಶಿಸಿದ್ದರು.