newsics.com
ಮಂಗಳೂರು: ಬಂಟ್ವಾಳದ ರಹೀಂ ಹತ್ಯೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಗೆ ಮುಸ್ಲಿಂ ಮುಖಂಡರು ಎಚ್ಚರಿಕೆ ಸಂದೇಶದ ವಿಚಾರವಾಗಿ ಇಂದು ಮಂಗಳೂರಿನಲ್ಲಿ ಕಾಂಗ್ರೆಸ್‌ನ ಮುಸ್ಲಿಂ ಮುಖಂಡರ ಸಭೆ ನಡೆಸಲಾಗಿತ್ತು., ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ನ ಮುಸ್ಲಿಂ ನಾಯಕರು ಸಭೆಗೆ ಆಗಮಿಸಿದ್ದರು. ಕಾಂಗ್ರೆಸ್ ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾ ಮೆ ನೀಡಿದ್ದಾರೆ.
ಈ ಸಭೆಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಎಸ್ ಮೊಹಮ್ಮದ್, ಮಾಜಿ ಮನಪಾ ವಿಪಕ್ಷ ನಾಯಕ ರವೂಫ್ ಸೇರಿದಂತೆ ಮುಸ್ಲಿಂ ಸಮುದಾಯದ, ಕಾಂಗ್ರೆಸ್ ಪಕ್ಷದ ಮುಖಂಡರು ರಾಜೀನಾಮೆ ಘೋಷಿಸಿದರು.
ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಭಾಷಣದ ವೇಳೆ ಸಿದ್ದರಾಮಯ್ಯ ಅವರನ್ನು ಹೊಗಳಿದ್ದು, ಸಾಮೂಹಿಕ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವುದಾಗಿ ಹೇಳಿದ್ದಾರೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಸೂಚನೆ ಹಿನ್ನೆಲೆಯಲ್ಲಿ ಒಂದು ವಾರ ಮುಂದೂಡುವುದಾಗಿ ಹೇಳಿಕೆ ನೀಡಿದ್ದಾರೆ.ಕೆಲ ಮುಸ್ಲಿಂ ನಾಯಕರು ಕೆಂಡಾಮಂಡಲವಾಗಿದ್ದಾರೆ ಎನ್ನಲಾಗಿದೆ.
ರಾಜೀನಾಮೆ ಕೊಡಲೇಬೇಕು ಎಂದು ಸಭಾಂಗಣದ ಮುಂದೆ ಬಂದು ಅಕ್ರೋಶ ವ್ಯಕ್ತಪಡಿಸಿದರು. ನಾಯಕರು ನಾವು ರಾಜೀನಾಮೆ ನೀಡುತ್ತೇವೆ ಎಂದು ಪಟ್ಟು ಹಿಡಿದರು. ಕೊನೆಗೆ ಮುಖಂಡರುಗಳು ತಾವು ರಾಜೀನಾಮೆ ನೀಡುವುದಾಗಿ ಘೋಷಿಸಿ ಸಭೆಯಿಂದ ನಿರ್ಗಮಿಸಿದರು.