newsics.com
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಡಾ.ಅರುಣ್ಚ್ಚುತ್ತಿರುವ ಸರಣಿ ಸೇಡಿನ ಹತ್ಯೆ, ಕೋಮು ಹಿಂಸಾಚಾರದ ವಿರುದ್ಧ ಜನರಿಂದ ಆಕ್ರೋಶ ವ್ಯಕ್ತವಾಗಿದ್ದು, ಇದರ ಬೆನ್ನಲ್ಲೇ ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ, ದ.ಕ. ಜಿಲ್ಲಾ ಎಸ್ಪಿಯಾಗಿ ಡಾ.ಅರುಣ್ ಕೆ. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.
ಇನ್ನು ಸಿಐಡಿ ಡಿಐಜಿಯಾಗಿ ಅನುಪಮ್ ಅಗರ್ವಾಲ್ ವರ್ಗಾವಣೆಯಾಗಿದ್ದಾರೆ. ಹಾಗೆಯೇ ಎಸ್ಪಿ ಯತೀಶ್ ಅವರಿಗೆ ಇನ್ನೂ ಸ್ಥಳ ನಿಯುಕ್ತಿ ಮಾಡದೆ ಎತ್ತಂಗಡಿ ಮಾಡಲಾಗಿ ಸರ್ಕಾರ ಈ ಆದೇಶ ಹೊರಡಿಸಿದೆ.
ಸುಧೀರ್ ಕುಮಾರ್ ರೆಡ್ಡಿ ಇದುವರೆಗೂ ಬೇಹುಗಾರಿಕಾ ಇಲಾಖೆಯ ಡಿ ಐ ಜಿ ಆಗಿದ್ದರು. ಅವರು ವರ್ಗಾವಣೆಯಾಗಿರುವ ಅನುಪಮ್ ಅಗ್ರವಾಲ್ ಅವರ ಸ್ಥಾನಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ. ಉಡುಪಿ ಎಸ್ಪಿಯಾದ್ದ ಡಾ.ಅರುಣ್ ಕೆ. ಅವರು ವರ್ಗಾವಣೆಯಾಗಿರುವ ಯತೀಶ್ ಎನ್. ಅವರ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.
l