newsics.com
ಪಂಜಾಬ್ : ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟಗೊಂಡು ನಾಲ್ವರು ಸಜೀವ ದಹನಗೊಂಡಿದ್ದು, 27 ಮಂದಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಲಂಬಿ ವಿಭಾಗದ ಫತುಹಿವಾಲಾ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.
ಕಾರ್ಖಾನೆಯಲ್ಲಿ ಸುಮಾರು 40 ಕಾರ್ಮಿಕರು ಇದ್ದರು. ಬೆಳಗಿನ ಜಾವ 1 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು,ರಾತ್ರಿ ಪಾಳಿಯ ನಂತರ ನಾವು ನಿದ್ರಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿತು ಮತ್ತು ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ.
ರಕ್ಷಣಾ ಕಾರ್ಯ ಮುಂದುವರೆದಿದ್ದು, ಸ್ಫೋಟದ ಕಾರಣ ಇನ್ನೂ ತಿಳಿದುಬಂದಿಲ್ಲ. ಹಲವಾರು ಜನರು ಗಾಯಗೊಂಡಿದ್ದಾರೆ ಮತ್ತು ಕೆಲವರು ಇನ್ನೂ ಸಿಲುಕಿಕೊಂಡಿರುವ ಶಂಕೆ ಇದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.