newsics.com
ಇತ್ತೀಚೆಗೆ ಸಾರ್ವಜನಿಕ ರಸ್ತೆಗಳಲ್ಲಿ ಪ್ರೇಮಿಗಳ ರೊಮ್ಯಾನ್ಸ್ ಸಾಮಾನ್ಯವಾಗಿಬಿಟ್ಟಿದೆ. ಅದರಲ್ಲೂ ಬೈಕ್ ಮೇಲೆ ಒಬ್ಬರನ್ನೊಬ್ಬರು ತಬ್ಬಿಕೊಂಡು ಅಶ್ಲೀಲವಾಗಿ ವರ್ತಿಸುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಇದೀಗ ಮತ್ತೊಂದು ವಿಡಿಯೋ ವೈರಲ್ ಆಗಿದೆ.
ಎಲ್ಲಿ ಹೇಗೆ ವರ್ತಿಸಬೇಕು ಎಂಬ ಕನಿಷ್ಠ ಪರಿಜ್ಞಾನವೂ ಇಲ್ಲದೆ ಪ್ರೇಮಿಗಳಿಬ್ಬರು ಬಸ್ಸಿನ ಹಿಂಬದಿಯಲ್ಲಿ ಕುಳಿತು ಹಗ್ಗಿಂಗ್ ಕಿಸ್ಸಿಂಗ್ ಅಂತ ರೊಮ್ಯಾನ್ಸ್ ಮಾಡಿದ್ದು, ಇವರ ಈ ಹುಚ್ಚಾಟವನ್ನು ಯಾರೋ ಮೊಬೈಲ್ನಲ್ಲಿ ಸೆರೆ ಹಿಡಿದು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.
ಈ ವಿಡಿಯೋವನ್ನು yours.jaans ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಲಾಗಿದೆ. ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಬಸ್ಸಿನ ಹಿಂಬದಿ ಸೀಟಿನಲ್ಲಿ ಜೋಡಿಹಕ್ಕಿಯೊಂದು ರೊಮ್ಯಾನ್ಸ್ ಮಾಡ್ತಾ ಕುಳಿತಿರುವ ದೃಶ್ಯವನ್ನು ಕಾಣಬಹುದು. ಹೌದು ಲೋಕದ ಪರಿಜ್ಞಾನವೇ ಇಲ್ಲದೆ ಈ ಹುಡುಗ ಹುಡುಗಿ ಒಬ್ಬರನ್ನೊಬ್ಬರು ತಬ್ಬಿಕೊಂಡು ಚುಂಬಿಸಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
https://www.instagram.com/reel/DKKdZpeJ36c/?igsh=MXV6Ynkzb2huMWtvNg==