newsics.com
ಬೆಂಗಳೂರು: BMTC ಬಸ್ ಚಾಲಕ ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿರುವ ಘಟನೆ ಕಸ್ತೂರ್ಬಾ ರಸ್ತೆಯ ಕ್ಷೀನ್ಸ್ ಜಂಕ್ಷನ್ (ಎಂ.ಜಿ.ರಸ್ತೆ) ಬಳಿ ನಡೆದಿದೆ.
ಮೇ 23ರ ಸಂಜೆ 5.40ಕ್ಕೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಬಿಎಂಟಿಸಿ ಬಸ್ ಚಾಲಕ ಮತ್ತು ಯುವತಿ ನಡುವೆ ಗಲಾಟೆಯಾಗಿದೆ. ಈ ಹಿನ್ನೆಲೆಯಲ್ಲಿ ಕ್ಷೀನ್ಸ್ ಜಂಕ್ಷನ್ನಲ್ಲಿ ಕಾರಿನಿಂದ ಇಳಿದ ಯುವತಿ ಬಿಎಂಟಿಸಿ ಬಸ್ ಚಾಲಕನನ್ನು ಪ್ರಶ್ನೆ ಮಾಡುತ್ತಿದ್ದರು. ಆದರೆ, ಚಾಲಕ ಯುವತಿಯ ಮೇಲೆ ಬಸ್ ನುಗ್ಗಿಸಿದ್ದಾರೆ.
ಯುವತಿ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡಿದ್ದಾರೆ. ಸ್ವಲ್ಪ ಯಾಮಾರಿದ್ದರೂ ಯುವತಿಯ ಜೀವಕ್ಕೆ ಕುತ್ತು ಬರುತ್ತಿತ್ತು. ಚಾಲಕನ ಕೃತ್ಯ ಕಂಡು ಜನರು ಬೆಚ್ಚಿಬಿದ್ದಿದ್ದರು.
ಯುವತಿಯ ಮೇಲೆ ಬಸ್ ಹತ್ತಿಸಲು ಯತ್ನಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಯುವತಿ ಮೇಲೆ ಬಿಎಂಟಿಸಿ ಬಸ್ ಹತ್ತಿಸಲು ಮುಂದಾಗಿದ್ದ ಚಾಲಕ ಪ್ರಶಾಂತ್‌ನನ್ನು ಅಮಾನತುಗೊಳಿಸಲಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ಮೇರೆಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಹಡ್ಸನ್ ಸಿಗ್ನಲ್ನಲ್ಲಿ ಟ್ಯಾಂಕರ್ ಹಾಗೂ ಬಿಎಂಟಿಸಿ ಬಸ್ ಮುಂದೆ ಯುವತಿ ಕಾರು ಓಡಿಸಿಕೊಂಡು ಬಂದರು. ಆಗ ಯುವತಿ ಟ್ಯಾಂಕರ್ ಚಾಲಕನಿಗೆ ಬೈಯುತ್ತಾರೆ. ನಂತರ ಕಾರ್ಪೋರೇಷನ್ ಸಿಗ್ನಲ್ನಲ್ಲಿ ಜನರನ್ನು ಹತ್ತಿಸಿಕೊಳ್ಳುವಾಗ, ಜಗಳದಲ್ಲಿ ಒಂದು ಸಿಗ್ನಲ್ ಹೋಯ್ತು ಅಂತಾ ನಾನು ಬೈದೆ ಎಂದು ಅಮಾನತು ಆದ ಬಿಎಂಟಿಸಿ ಚಾಲಕ ಪ್ರಶಾಂತ್ ಹೇಳಿದರು.
ಈ ಸಲುವಾಗಿ ಬಿಎಂಟಿಸಿ ಬಸ್ ಅನ್ನು ಮುಂದಕ್ಕೆ ಹೋಗದ ಹಾಗೆ ಅಡ್ಡಾದಿಡ್ಡಿ ಚಾಲನೆ ಮಾಡಿಕೊಂಡು ಬಂದರು. ಕಬ್ಬನ್ ಪೇಟೆ ಸಿಗ್ನಲ್ನಲ್ಲಿ ಬಸ್ ನಿಲ್ಲಿಸಿದಾಗ ಅವಾಚ್ಯ ಶಬ್ದದಿಂದ ಬೈದು, ನನ್ನ ಮೇಲೆ ಹಲ್ಲೆ ಮಾಡಲು ಮುಂದಾದರು. ಕೆಳಗೆ ಇಳಿ ಅಂತ ಕೈ ಸನ್ನೆ ಮಾಡಿದರು. ನನ್ನ ತಪ್ಪು ಇಲ್ಲದೆ ನಾನು ಏಕೆ ಕೆಳಗೆ ಇಳಿಯಲಿಲ್ಲ. ಎಡಭಾಗಕ್ಕೆ ಬಸ್ ಚಲಾಯಿಸಿದೆ ಹೊರತು ಯುವತಿ ಮೇಲೆ ನುಗ್ಗಿಸಲು ಪ್ರಯತ್ನಿಸಿಲ್ಲ ಎಂದು ಆರೋಪಿ ಡ್ರೈವರ್ ಪ್ರಶಾಂತ್ ಹೇಳಿದ್ದಾನೆ.
https://twitter.com/i/status/1929118933900300437
Relationsip ನಿಮ್ಮ ಲವರ್‌ಗೆ ಇಂಥ ಗಿಫ್ಟ್ ಕೊಡಲೇಬೇಡಿ, ಬ್ರೇಕಪ್ ಆಗಬಹುದು!
Rain Alert ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಿಗೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ