newsics.com
ರಾಯಚೂರು: ಹಟ್ಟಿಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ ಆಗಿ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿ ನಡೆದಿದೆ.
ಹಟ್ಟಿ ಚಿನ್ನದ ಗಣಿಯ ಸುಮಾರು 2800 ಅಡಿ ಆಳದಲ್ಲಿ ಗಣಿಗಾರಿಕೆ ನಡೆಸುತ್ತಿದ್ದ ವೇಳೆ ರ‍್ ಬ್ಲಾಸ್ಟ್ ಆಗಿದ್ದು, ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾರೆ. ಮತ್ತೋರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿದೆ.
ಶರಣಶರಣಬಸವ ವೀರಾಪುರ(35) ಮೃತಪಟ್ಟ ಕಾರ್ಮಿಕ. ಹಟ್ಟಿ ಚಿನ್ನದ ಗಣಿ ಕಂಪೆನಿಯ ಸರ್ಕಲ್ ಶಾಪ್ ನ 28 ಲೆವಲ್ ( ಅಡಿಯಲ್ಲಿ) ಏರ್ ಬ್ಲಾಸ್ಟ್ ಆಗಿ ಕಲ್ಲು ಅದಿರು ಕುಸಿದು ಈ ಅವಘಡ ಸಂಭವಿಸಿದೆ. ಈ ವೇಳೆ ಅದರಡಿಯಲ್ಲಿ ಸಿಲುಕಿದ್ದ ಕಾರ್ಮಿಕರ ಪೈಕಿ ಓರ್ವ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಚಿನ್ನದ ಗಣಿಯಲ್ಲಿ ಇನ್ನಷ್ಟು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.