Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Kamal Haasan ಕರ್ನಾಟಕದಲ್ಲಿ ಥಗ್ ಲೈಫ್ ಗೆ ವಿರೋಧ; ತಮಿಳುನಾಡಿಗೆ ಮನವಿ ಮಾಡಿದ ಕಮಲ್ ಹಾಸನ್
ಪ್ರಮುಖಮನರಂಜನೆ

Kamal Haasan ಕರ್ನಾಟಕದಲ್ಲಿ ಥಗ್ ಲೈಫ್ ಗೆ ವಿರೋಧ; ತಮಿಳುನಾಡಿಗೆ ಮನವಿ ಮಾಡಿದ ಕಮಲ್ ಹಾಸನ್

Share
1 Min Read
SHARE

newsics.com

ಕಮಲ್ ಹಾಸನ್ ನಟಿಸಿರುವ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಇನ್ನು ಮೂರು ದಿನಗಳಷ್ಟೆ ಬಾಕಿ ಉಳಿದಿವೆ. ಕರ್ನಾಟಕದಲ್ಲಿ ‘ಥಗ್ ಲೈಫ್’ ಬಿಡುಗಡೆ ಆಗುವುದು ಬಹುತೇಕ ಅನುಮಾನವಾಗಿದೆ. ಸಿನಿಮಾ ವಿತರಕರು ‘ಥಗ್ ಲೈಫ್’ ಸಿನಿಮಾ ಬಿಡುಗಡೆ ಮಾಡದೇ ಇರಲು ನಿರ್ಧಾರ ಮಾಡಿರುವ ಸುದ್ದಿ ಹರಿದಾಡುತ್ತಿದೆ.

ಕನ್ನಡಪರ ಸಂಘಟನೆಗಳಂತೂ, ‘ಥಗ್ ಲೈಫ್’ ಸಿನಿಮಾ ಬಿಡುಗಡೆ ಮಾಡಿದರೆ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿವೆ. ಕರ್ನಾಟಕದಲ್ಲಿ ತೀವ್ರ ಹಿನ್ನೆಡೆ ಖಾತ್ರಿ ಆಗುತ್ತಿದ್ದಂತೆ ಕಮಲ್ ಹಾಸನ್ ತಮಿಳುನಾಡು ಸರ್ಕಾರದ ಬಳಿ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ.

‘ಥಗ್ ಲೈಫ್’ ಸಿನಿಮಾ ಜೂನ್ 5 ರಂದು ಬಿಡುಗಡೆ ಆಗಲಿದೆ. ಇದೀಗ ತಮಿಳುನಾಡು ಸರ್ಕಾರದ ಬಳಿ ಮನವಿ ಮಾಡಿರುವ ಕಮಲ್ ಹಾಸನ್, ಸಿನಿಮಾ ಟಿಕೆಟ್ ದರಗಳನ್ನು ಕಡಿಮೆ ಮಾಡುವಂತೆ ವಿನಂತಿಸಿದ್ದಾರೆ. ಇತ್ತೀಚೆಗಷ್ಟೆ ತಮಿಳುನಾಡಿನ ಸ್ಟಾಲಿನ್ ಸರ್ಕಾರ, ಲೋಕಲ್ ಬಾಡಿ ಎಂಟರ್ಟೈನ್ಮೆಂಟ್ ಟ್ಯಾಕ್ಸ್ (ಸ್ಥಳೀಯ ಮನೊರಂಜನಾ ತೆರಿಗೆ)ಯನ್ನು 4 ರಿಂದ 8.6% ಹೆಚ್ಚಿಸಿದೆ. ಇದರಿಂದಾಗಿ ಸಿನಿಮಾದ ಟಿಕೆಟ್ ಬೆಲೆಗಳು ತಮಿಳುನಾಡು ರಾಜ್ಯದಾದ್ಯಂತ ಹೆಚ್ಚಳ ಆಗಿದೆ. ಈ ತೆರಿಗೆಯನ್ನು ಕಡಿಮೆ ಮಾಡುವಂತೆ ಕಮಲ್ ಹಾಸನ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

‘ಕೋವಿಡ್ ಬಳಿಕ ತಮಿಳು ಸಿನಿಮಾ ರಂಗವು ಸಾಕಷ್ಟು ನಷ್ಟವನ್ನು ಅನುಭವಿಸಿದ್ದು, ಈಗ ಟಿಕೆಟ್ ಬೆಲೆಯೂ ಹೆಚ್ಚಾದರೆ ಚಿತ್ರರಂಗಕ್ಕೆ ಹೊಡೆತ ಬೀಳುತ್ತದೆ. ಹಾಗಾಗಿ ಟಿಕೆಟ್ ದರಗಳನ್ನು ಕಡಿಮೆ ಮಾಡಬೇಕು’ ಎಂದು ಕಮಲ್ ಮನವಿ ಮಾಡಿದ್ದಾರೆ. ಈ ಬಗ್ಗೆ ಸರ್ಕಾರ ಯಾವುದೇ ಪ್ರತಿಕ್ರಿಯೆಯನ್ನು ಈ ವರೆಗೆ ನೀಡಿಲ್ಲ. ತಮಿಳುನಾಡು ಸರ್ಕಾರದೊಟ್ಟಿಗೆ ಆತ್ಮೀಯ ಬಂಧವನ್ನು ಕಮಲ್ ಹಾಸನ್ ಹೊಂದಿದ್ದು, ಆಡಳಿತ ಪಕ್ಷವಾದ ಡಿಎಂಕೆ ಬೆಂಬಲದಿಂದ ರಾಜ್ಯಸಭೆಗೆ ಕಮಲ್ ಕಾಲಿಡುತ್ತಿದ್ದಾರೆ.

‘ತಮಿಳು ಭಾಷೆಯಿಂದ ಕನ್ನಡದ ಉಗಮವಾಗಿದೆ’ ಎಂಬ ಕಮಲ್ ಹಾಸನ್ ಹೇಳಿಕೆಗೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಕಮಲ್ ಹೇಳಿಕೆಯನ್ನು ವಿರೋಧಿಸಿ ಅವರ ನಟನೆಯ ‘ಥಗ್ ಲೈಫ್’ ಸಿನಿಮಾದ ವಿರುದ್ಧ ಕನ್ನಡಪರ ಸಂಘಟನೆಗಳು, ಫಿಲಂ ಚೇಂಬರ್ ನಿಷೇಧ ಪ್ರಕಟಿಸಿವೆ. ‘ಥಗ್ ಲೈಫ್’ ಸಿನಿಮಾವನ್ನು ಮಣಿರತ್ನಂ ನಿರ್ದೇಶನ ಮಾಡಿದ್ದಾರೆ. ಸಿನಿಮಾನಲ್ಲಿ ಸಿಂಭು, ಅಭಿರಾಮಿ, ತ್ರಿಷಾ ಇನ್ನಿತರರು ನಟಿಸಿದ್ದಾರೆ.

Canara Bank New Rules: ಕೆನರಾ ಬ್ಯಾಂಕ್‌ನಲ್ಲಿ ಖಾತೆ ಹೊಂದಿರುವ ಗ್ರಾಹಕರಿಗೆ ಗುಡ್‌ನ್ಯೂಸ್‌

TAGGED:Kamal Haasan opposes Thug Life in Karnataka; Kamal Haasan appeals to Tamil Nadu
Share This Article
Facebook Twitter Copy Link Print
Previous Article Canara Bank New Rules: ಕೆನರಾ ಬ್ಯಾಂಕ್‌ನಲ್ಲಿ ಖಾತೆ ಹೊಂದಿರುವ ಗ್ರಾಹಕರಿಗೆ ಗುಡ್‌ನ್ಯೂಸ್‌
Next Article Good News ತಿರುಪತಿ ಭಕ್ತರಿಗೆ ಗುಡ್ ನ್ಯೂಸ್: ವಂದೇ ಭಾರತ್ ರೈಲು ಪ್ರಯಾಣ ಇನ್ನಷ್ಟು ಸುಲಭ

Popular Posts

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

You Might Also Like

ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?