newsics.com
ವಿಜಯಪುರ: ರಾಜ್ಯದಲ್ಲಿ ಬ್ಯಾಂಕ್ ಹಾಗೂ ಎಟಿಎಂ ರಾಬರಿ ಪ್ರಕರಣಗಳು ಮುಂದುವರೆದಿದ್ದು, ಇದೀಗ ವಿಜಯಪುರ ಜಿಲ್ಲೆ ಮನಗೂಳಿಯಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ಅಂದಾಜು ₹52.26 ಕೋಟಿ ಮೌಲ್ಯದ 58 ಕೆಜಿ 976 ಗ್ರಾಂ ಚಿನ್ನಾಭರಣ ಮತ್ತು ₹5.20 ಲಕ್ಷ ನಗದು ಕಳ್ಳತನದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ವಿಜಯಪುರ ಜಿಲ್ಲೆಯ ಮನಗೂಳಿಯಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ 52.26 ಕೋಟಿ ರೂ. ಮೌಲ್ಯದ 58 ಕೆಜಿ 976 ಚಿನ್ನಾಭರಣ ಮತ್ತು 5.20 ಲಕ್ಷ ನಗದು ಕಳ್ಳತನ ಮಾಡಿ ಖದೀಮರು ಪರಾರಿಯಾಗಿರುವ ಘಟನೆ ನಡೆದಿದೆ.
ಮೇ 23ರಂದೇ ಕೃತ್ಯ ಎಸಗಿರುವ ಶಂಕೆ ಇದ್ದು, ಕಳ್ಳರು ಈವರೆಗೂ ಪತ್ತೆಯಾಗಿಲ್ಲ. ಇದು ಚಿನ್ನದ ಮೌಲ್ಯದ ರೂಪದಲ್ಲಿ ರಾಜ್ಯದಲ್ಲಿ ಯೇ ಅತಿ ದೊಡ್ಡ ಬ್ಯಾಂಕ್ ಕಳ್ಳತನ ಎನ್ನಲಾಗುತ್ತಿದೆ. ಈ ಸಂಬಂಧ ಬ್ಯಾಂಕ್‌ನ ಹಿರಿಯ ವ್ಯವಸ್ಥಾಪಕ ಕಲ್ಮೇಶ್ ಪೂಜಾರಿಯವರು ಮನ ಗೂಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮೇ 23ರ ಸಂಜೆ 6 ಗಂಟೆಯಿಂದ 25ರ ಬೆಳಗ್ಗೆ 11.30ರ ಅವಧಿಯಲ್ಲಿ ಕೃತ್ಯ ಎಸಗಿರುವ ಶಂಕೆ ಇದೆ. ಕಳ್ಳರ ಪತ್ತೆಗೆ ಎಂಟು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
ಮನಗೂಳಿಯ ಕೆನರಾ ಬ್ಯಾಂಕ್ನಲ್ಲಿ 58 ಕೆಜಿಗೂ ಆಧಿಕ ಚಿನ್ನಾಭರಣ ನಗದು ಕಳ್ಳತನವಾಗಿರುವುದು ಗ್ರಾಹಕರಲ್ಲಿ ಭಯ ಮೂಡಿಸಿದೆ. ಕಳ್ಳತನ ಮಾಡಿದ ಆರೋಪಿಗಳ ಜಾಡನ್ನು ಖಾಕಿ ಪಡೆ ಬೆನ್ನುಹತ್ತಿದೆ. ಶೀಘ್ರವೇ ಇಡೀ ಪ್ರಕರಣಕ್ಕೆ ತಿಲಾಂಜಲಿ ಹಾಡಲಾಗುತ್ತದೆ ಎಂದು ಪೊಲೀಸ್ ಆಧಿಕಾರಿಗಳು ಭರವಸೆ ನೀಡಿದ್ದಾರೆ. ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Viral news ಮದುವೆಯಾಗದಿದ್ದರೆ ಏನೆಲ್ಲಾ ಲಾಭ? ವೈರಲ್ ಆಯ್ತು ಮಹಿಳೆಯ ಪೋಸ್ಟ್, ಆನ್‌ಲೈನ್‌ನಲ್ಲಿ ಭಾರೀ ಚರ್ಚೆ!