newsics.com
ನಟಿ ಅನುಷ್ಕಾ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ‘ಘಾಟಿ’ ಚಿತ್ರದ ರಿಲೀಸ್ ಕುರಿತು ನಟಿಯ ಬಿಗ್ ಅಪ್ಡೇಟ್ ಸಿಕ್ಕಿದೆ.
ಕಳೆದ ಕೆಲವು ದಿನಗಳಿಂದ ಚಿತ್ರ ಯಾವಗ ತೆರೆಕಾಣಲಿದೆ ಎಂಬುದೇ ಪ್ರಶ್ನೆಯಾಗಿತ್ತು. ಕಡೆಗೂ ಅದಕ್ಕೆ ಉತ್ತರ ಸಿಕ್ಕಿದೆ. ಈ ಹಿಂದೆ ನಿಗದಿಪಡಿಸಿದ್ದ ಏ.18ರಂದು ‘ಘಾಟಿ’ ಬಹುತೇಕ ಚಿತ್ರಮಂದಿಗರಳಲ್ಲಿ ರಿಲೀಸ್ ಆಗಬೇಕಿತ್ತು. ಆದ್ರೆ, ಒಂದಷ್ಟು ಗೊಂದಲಗಳಿಂದ ಬಿಡುಗಡೆ ದಿನಾಂಕ ಮುಂದೂಡಿಕೆ ಆಗಿತ್ತು. ಹೌದು, ಇದೇ ಜುಲೈ 11ರಂದು ಬಹುತೇಕ ಚಿತ್ರಮಂದಿರಗಳಲ್ಲಿ ‘ಘಾಟಿ’ ತೆರೆಕಾಣಲಿದೆ.
ಕ್ರಿಶ್ ನಿರ್ದೇಶನದ ಹಾಗೂ ಅನುಷ್ಕಾ ನಟಿಸಿರುವ ಈ ಚಿತ್ರದ ಚಿತ್ರೀಕರಣ ಸೇರಿದಂತೆ ಬಹುತೇಕ ಕೆಲಸಗಳು ಈಗಾಗಲೇ ಪೂರ್ಣಗೊಂಡಿದ್ದು, ಸಿನಿಮಾ ತೆರೆಗೆ ಅಪ್ಪಳಿಸುವುದು ಮಾತ್ರ ಬಾಕಿ ಉಳಿದಿದೆ.
ಏಕಕಾಲಕ್ಕೆ ತೆಲುಗು, ಕನ್ನಡ, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಚಿತ್ರ ರಿಲೀಸ್ ಆಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಎರಡು ವರ್ಷಗಳ ಬಳಿಕ ಮತ್ತೆ ಬೆಳ್ಳಿತೆರೆಯಲ್ಲಿ ಮಿಂಚಲು ಖಡಕ್ ಪಾತ್ರದ ಮೂಲಕ ಕಮ್ಬ್ಯಾಕ್ ಮಾಡಿರುವ ಅನುಷ್ಕಾರನ್ನು ‘ಘಾಟಿ’ಯಾಗಿ ನೋಡಲು ಅವರ ಅಭಿಮಾನಿ ಬಳಗ ತೀವ್ರ ಕುತೂಹಲದಿಂದ ಕಾಯುತ್ತಿದೆ.