newsics.com
ಬೆಂಗಳೂರು: ನಟ ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಸಿನಿಮಾದ ಬಿಡುಗಡೆಗೆ ಕರ್ನಾಟಕದಲ್ಲಿ ನಿರ್ಬಂದಿಸಿದ ಬೆನ್ನಲ್ಲೇ, ‘ಸಿನಿಮಾ ನಿರ್ಮಾಣ ಸಂಸ್ಥೆಯಾದ, ‘ರಾಜ್‌ಕಮಲ್ ಫಿಲ್ಮ್ಸ್ ಇಂಟರ್‌ನ್ಯಾಷನಲ್’ ಹೈಕೋರ್ಟ್ ಮೆಟ್ಟಿಲೇರಿದೆ.
ಇದೀಗ ಬಹುನಿರೀಕ್ಷಿತ ತಮಿಳುನಟ ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಚಿತ್ರ ಬಿಡುಗಡೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ
ಥಗ್ ಲೈಫ್ ಸಿನಿಮಾ ರಿಲೀಸ್‌ಗೆ ಭದ್ರತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಲಾಗಿದೆ
ಅರ್ಜಿದಾರರ ಪರ ವಕೀಲರೇ 1 ವಾರಗಳ ಸಮಯ ಕೇಳಿದರಿಂದ ಈ ಸಮಸ್ಯೆ ಬಗೆಹರಿಯುವವರೆಗೂ ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಪ್ರದರ್ಶನ ಇಲ್ಲ. ಕಮಲ್ ಹಾಸನ್ ಅವರು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದು, ಆ ಪತ್ರದಲ್ಲೂ ಕ್ಷಮೆ ಕೇಳಿರಲಿಲ್ಲ. ಹೀಗಾಗಿ ಫಿಲ್ಮ್ ಚೇಂಬರ್ ಥಗ್ ಲೈಫ್ ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆಗೆ ಅವಕಾಶ ಕೊಡಲ್ಲ ಎಂದು ಹೇಳಿದೆ.