newsics.com
ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್ಸಿಬಿ ಬೃಹತ್ ಮೊತ್ತ ಕಲೆ ಹಾಕುವಲ್ಲಿ ವಿಫಲವಾಗಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 190 ರನ್ಗಳಿಸಿದೆ.
ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಇತ್ತ ಇನ್ನಿಂಗ್ಸ್ ಆರಂಭಿಸಿದ ಆರ್ಸಿಬಿ ನಿರೀಕ್ಷಿತ ಆರಂಭ ಪಡೆಯಲಿಲ್ಲ. ಸ್ಫೋಟಕ ಆಟಗಾರ ಫಿಲ್ ಸಾಲ್ಟ್ 9 ಎಸೆತಗಳಲ್ಲಿ 2 ಬೌಂಡರಿ, 1 ಸಿಕ್ಸರ್ ಸಹಿತ 16 ರನ್ಗಳಿಸಿ ಜೇಮಿಸನ್ ಬೌಲಿಂಗ್ನಲ್ಲಿ ಶ್ರೇಯಸ್ ಅಯ್ಯರ್ಗೆ ಕ್ಯಾಚ್ ನೀಡಿ ಔಟ್ ಆದರು. ನಂತರ ಬಂದ ಮಯಾಂಕ್ 2ನೇ ವಿಕೆಟ್ ಜೊತೆಯಾಟದಲ್ಲಿ ವಿರಾಟ್ ಕೊಹ್ಲಿ ಜೊತೆಗೆ 28 ಎಸೆತಗಳಲ್ಲಿ 38 ರನ್ಗಳಿಸಿದರು. ಲಿಯಾಮ್ ಲಿವಿಂಗ್ಸ್ಟೋನ್ 2 ಸಿಕ್ಸರ್ನೊಂದಿಗೆ 25 ರನ್ಗಳ ಕಾಣಿಕೆ ನೀಡಿದರು. ಉಪನಾಯಕ 240 ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬಿಸಿ 10 ಬಾಲ್ನಲ್ಲಿ 24 ರನ್ಗಳ ಕಾಣಿಕೆ ನೀಡಿದರು. ಶೆಫಾರ್ಡ್ 17 ರನ್ಗಳಿಸಿ ಔಟ್ ಆದರೆ, ಕೃನಾಲ್ ಪಾಂಡ್ಯ 4 ರನ್ಗಳಿಸಿ ಔಟ್ ಆದರು.
.