newsics.com
ಕಿರುತೆರೆ ನಟಿ ಹಾಗೂ ಬಿಗ್‌ಬಾಸ್ ಖ್ಯಾತಿಯ ವೈಷ್ಣವಿ ಗೌಡ ಅವರ ನಿಶ್ಚಿತಾರ್ಥ ಇತ್ತೀಚೆಗಷ್ಟೇ ನಡೆದಿತ್ತು. ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇತ್ತೀಚೆಗಷ್ಟೇ ವೈಷ್ಣವಿ ಅವರು ಅಭಿನಯಿಸುತ್ತಿದ್ದ ಸೀತಾರಾಮ ಸೀರಿಯಲ್ ಪೂರ್ಣಗೊಂಡ ಬೆನ್ನಲ್ಲೇ ಅವರ ಮನೆಯಲ್ಲಿ ಮದುವೆ ಶಾಸ್ತ್ರಗಳು ಶುರುವಾಗಿವೆ. ಈ ಖುಷಿ ವಿಚಾರವನ್ನು ವೈಷ್ಣವಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮನೆಯಲ್ಲಿ ನಡೆಯುತ್ತಿರುವ ಮದುವೆ ಶಾಸ್ತ್ರಗಳ ಫೋಟೋಗಳನ್ನು ಕೂಡ ಶೇರ್ ಮಾಡಿದ್ದರು.
ನಾಳೆ ಗುರು ಹಿರಿಯರ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಬನ್ನೇರುಘಟ್ಟ ರಸ್ತೆಯಲ್ಲಿರೋ ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ಮದುವೆ ನಡೆಯಲಿದೆ. ಈಗಾಗಲೇ ನಟಿ ವೈಷ್ಣವಿ ಗೌಡ ಮನೆಯಲ್ಲಿ ಚಪ್ಪರ ಪೂಜೆ, ಮೆಹೆಂದಿ ಶಾಸ್ತ್ರ ಹಾಗೂ ಅರಶಿಣ ಶಾಸ್ತ್ರ ಸೇರಿದಂತೆ ಗೌಡರ ಸಂಪ್ರದಾಯದಂತೆ ಶಾಸ್ತ್ರಗಳು ನಡೀತಿವೆ.
ವೈಷ್ಣವಿ ಗೌಡ ಅವರ ನಿಶ್ಚಿತಾರ್ಥ ಇತ್ತೀಚೆಗೆ ನಡೆದಿತ್ತು. ಇಂಡಿಯನ್ ಏರ್‌ಫೋರ್ಸ್ ಅಲ್ಲಿ ಕೆಲಸ ಮಾಡುತ್ತಿರುವ ಛತ್ತಿಸ್‌ಗಢದ ಅನುಕೂಲ್ ಮಿಶ್ರಾ ಅವರೊಂದಿಗೆ ವೈಷ್ಣವಿ ಹಸಮಣೆ ಏರಲಿದ್ದಾರೆ.