newsics.com
ಬೆಂಗಳೂರು : ತೆರೆದ ವಾಹನದಲ್ಲಿ ಆರ್ಸಿಬಿ ಆಟಗಾರರಿಗೆ ಮೆರವಣಿಗೆ ಇರುವುದಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟಪಡಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ತೆರೆದ ವಾಹನದಲ್ಲಿ ಆರ್ಸಿಬಿ ಆಟಗಾರರ ಮೆರವಣಿಗೆ ಇಲ್ಲ. ಭದ್ರತೆಯ ದೃಷ್ಟಿಯಿಂದ ತೆರೆದ ವಾಹನದಲ್ಲಿ ಆರ್ಸಿಬಿ ಆಟಗಾರರಿಗೆ ಮೆರವಣಿಗೆ ಮಾಡಲ್ಲ. ಆರ್ಸಿಬಿ ತಂಡದ ಆಟಗಾರರಿಗೆ ಸರಕಾರದಿಂದ ಅಭಿನಂದನೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.
ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಅಭಿನಂದನೆ ಸಲ್ಲಿಕೆ ಮಾಡಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಅಭಿನಂದನೆ ಸಲ್ಲಿಸಲಾಗುವುದು. ಆರ್ಸಿಬಿ ತಂಡದ ಪರವಾಗಿ ಒಬ್ಬರು ಮಾತನಾಡಲಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಇನ್ನು ಇದೇ ವೇಳೆ ಅಭಿನಂದನಾ ಕಾರ್ಯಕ್ರಮ ಹಿನ್ನೆಲೆಯಲ್ಲಿ ವಿಧಾನಸೌಧದ ಮುಂಭಾಗದಲ್ಲಿ ಕಾರ್ಯಕ್ರಮದ ಸಿದ್ಧತೆಗಳನ್ನು ಜಿ ಪರಮೇಶ್ವರ್ ಪರಿಶೀಲಿಸಿದರು.
ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇದೀಗ ಬೆಂಗಳೂರಿಗೆ ಆಗಮಿಸಿದೆ. ಇಂದು ಸಂಜೆ ಬೆಂಗಳೂರಿನ ವಿಧಾನಸೌಧದಲ್ಲಿ ಗ್ರಾಂಡ್ ಸ್ಟೆಪ್ಸ್ ಮೇಲೆ ಅವರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ.
passengers ಜನರ ಅಸಹಾಕತೆಯೇ ಇವರ ಬಂಡವಾಳ; ಅಗ್ರಿಗೇಟರ್ ಕಂಪನಿಗಳ ವಿರುದ್ಧ ಪ್ರಯಾಣಿಕರ ಆಕ್ರೋಶ