ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವ ಸಮಾರಂಭದ ವೇಳೆ ಕಾಲ್ತುಳಿತದಿಂದ ಸಾವು-ನೋವು ನೆನೆದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ
ಮಾಧ್ಯಮಗಳ ಮುಂದೆ ಅಳುತ್ತಲೇ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಮಕ್ಕಳು, ಚಿಕ್ಕಮಕ್ಕಳು ಉಸಿರಾಡಲು ಆಗದೇ ಜೀವ ಬಿಟ್ಟಿದ್ದಾರೆ. 14, 15 ವರ್ಷದ ಮಕ್ಕಳು ಘಟನೆಯಲ್ಲಿ ಪ್ರಾಣ ಕಳೆದುಕೊಂಡಿರೋದು ನಾನು ನೋಡಿದೆ. 10 ಜನರನ್ನು ನೋಡಿದ್ದೇನೆ. ಈ ರೀತಿ ಆಗಬಾರದಿತ್ತು. ಅವರ ಕುಟುಂಬಗಳಿಗೆ ಈ ಘಟನೆಯನ್ನು ಅರಗಿಸಿಕೊಳ್ಳಲು ಆಗಲ್ಲ ಎಂದು ದುಃಖಿಸಿದರು.
ಯಾರು ಏನೇ ಹೇಳಿದರೂ ಟೀಕೆ ಮಾಡಲಿ, ಸದನದಲ್ಲಿ ಎಲ್ಲವೂ ಬರಲಿದೆ. ಅವರವರ ಕಾಲದಲ್ಲಿ ಏನಾಯ್ತು ಅಂತ ಗೊತ್ತಿದೆ. ರಾಜ್ ಕುಮಾರ್ ಸತ್ತಾಗ ಏನಾಯ್ತು ಅಂತ ಗೊತ್ತಿದೆ. ನಾನು ಆಗ ದೆಹಲಿಯಲ್ಲಿ ಇದ್ದೆ, ಕುಮಾರಸ್ವಾಮಿ ಟೀಕೆ ಮಾಡುತ್ತಲೇ ಇರಲಿ. ಡರ್ಟಿ ಪಾಲಿಟಿಕ್ಸ್ ನಾನು ಮಾತಾಡಲ್ಲ. ಹೌದು ಯಾರೇ ಮಾಡಿದರೂ ಕೂಡ ಸರ್ಕಾರ ಜವಬ್ದಾರಿ ತೆಗೆದುಕೊಳ್ಳುತ್ತದೆ. ಇದು ಕರ್ನಾಟಕದ ಇಮೇಜ್, ನಮ್ಮ ಮನಸ್ಸಿಗೆ, ನಮ್ಮ ಕುಟುಂಬಕ್ಕೂ ನೋವಾಗಿದೆ ಎಂದು ಹೇಳಿದರು.