newsics.com
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ಗುರುವಾರ(ಜೂ.5) ಮಧ್ಯಾಹ್ನ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.
ಘಟನೆ ಬಗ್ಗೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಕೇಸು ದಾಖಲಿಸಿಕೊಂಡಿದ್ದು, ಗುರುವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಿದೆ.
ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳ ಸಮ್ಮುಖದಲ್ಲಿ ವಿಚಾರಣೆ ನಡೆಯಲಿದ್ದು, ಘಟನೆ ಬಗ್ಗೆ ಸರ್ಕಾರ ಸಂಪೂರ್ಣ ವಿವರ ನೀಡಬೇಕಿದೆ.
ಬುಧವಾರ ವಿಧಾನಸೌಧ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ನಡೆಯುವಾಗ ಹೈಕೋರ್ಟ್ ಕಟ್ಟಡದ ಮೇಲೆಯೂ ಜನರು ಹತ್ತಿ ವೀಕ್ಷಿಸುತ್ತಿದ್ದರು. ಈ ಸಂದರ್ಭದ ಫೋಟೋ – ವಿಡಿಯೊಗಳು ಸಾಕಷ್ಟು ಹರಿದಾಡಿದ್ದು ಭದ್ರತಾ ಲೋಪವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದಿಂದ ಹೈಕೋರ್ಟ್ ವಿವರ ಕೇಳಿದೆ.
ಐಪಿಎಲ್ -2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಗೆದ್ದ ನಂತರ ಕೇವಲ 24 ಗಂಟೆಯೊಳಗೆ ಬೆಂಗಳೂರಿಗೆ ಬಂದು ಸರ್ಕಾರ ಮತ್ತು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತು.
ಇಷ್ಟೊಂದು ತರಾತುರಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದೇಕೆ, ಅದಕ್ಕೆ ಪೂರ್ವ ತಯಾರಿ ನಡೆಸಲಾಗಿತ್ತೇ, ಪೊಲೀಸ್ ಭದ್ರತೆ ಹೇಗೆ ಕೈಗೊಳ್ಳಲಾಯಿತು, ಭೀಕರ ಕಾಲ್ತುಳಿತ ಹೇಗೆ ಉಂಟಾಯಿತು ಎಂಬ ಬಗ್ಗೆ ಸರ್ಕಾರ ಹೈಕೋರ್ಟ್‌ಗೆ ಉತ್ತರ ನೀಡಬೇಕಿದೆ.
ಇನ್ನೂ ದಾಖಲಾಗಿಲ್ಲ ಎಫ್‌ಐಆರ್:
ಐಪಿಎಲ್ ವಿಜಯೋತ್ಸವ ಆಚರಣೆ ಸಂದರ್ಭ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಜನ ಗಾಯಗೊಂಡರೂ ಇನ್ನೂ ಎಫ್ ಐಆರ್ ದಾಖಲಾಗಿಲ್ಲ. ಘಟನೆಯನ್ನು ಕೇವಲ ‘ಅಸಹಜ ಸಾವು (UDR)‘ ಎಂದು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಹನ್ನೊಂದು ಯುಡಿಆರ್ ದಾಖಲಾಗಿವೆ.
Actress Shobha Shetty ಸೋಷಿಯಲ್ ಮೀಡಿಯಾಗೆ ಗುಡ್ ಬೈ ಹೇಳಿದ ನಟಿ ಶೋಭಾ ಶೆಟ್ಟಿ, ಈ ಗ್ಲಾಮರಸ್ ಸುಂದರಿಗೇನಾಯ್ತು?
US news 12 ದೇಶಗಳನ್ನು ಅಪಾಯಕಾರಿ ವರ್ಗಕ್ಕೆ ಸೇರಿಸಿದ ಟ್ರಂಪ್, ಅಮೆರಿಕ ಪ್ರವೇಶ ನಿಷೇಧ