newsics.com
ಝಬುವಾ: ಸಿಮೆಂಟ್ ತುಂಬಿದ್ದ ಟ್ರಕ್ ವ್ಯಾನ್ ಮೇಲೆ ಉರುಳಿ ಬಿದ್ದ ಪರಿಣಾಮ 9 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಝಬುವಾ ಜಿಲ್ಲೆಯ ಮೇಘನಗರ ತಹಸಿಲ್ನ ಸಂಜೆಲಿ ರೈಲ್ವೆ ಕ್ರಾಸಿಂಗ್ ಬಳಿ ನಡೆದಿದೆ.
ಒಂದೇ ಕುಟುಂಬದ 9 ಸದಸ್ಯರು ಪ್ರಾಣ ಕಳೆದುಕೊಂಡಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.
ತಾತ್ಕಾಲಿಕ ರಸ್ತೆ ಮೂಲಕ ನಿರ್ಮಾಣ ಹಂತದಲ್ಲಿರುವ ರೈಲು ಮೇಲ್ಸೇತುವೆ ದಾಟುತ್ತಿದ್ದ ಟ್ರಕ್ ಸಮತೋಲನ ಕಳೆದುಕೊಂಡು ಬಿದ್ದಿದೆ. ಮೇಘನಗರ ಬಳಿ ಟ್ರಕ್ ಪಲ್ಟಿಯಾಗಿ ಅವರ ವಾಹನದ ಮೇಲೆ ಬಿದ್ದಿದೆ. ಅಧಿಕಾರಿಗಳ ಪ್ರಕಾರ, ಅಪಘಾತ ಸಂಭವಿಸಿದಾಗ ಅವರು ಮದುವೆ ಸಮಾರಂಭದಿಂದ ಮನೆಗೆ ಹಿಂತಿರುಗುತ್ತಿದ್ದರು. ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.